Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:53 - ಕನ್ನಡ ಸತ್ಯವೇದವು C.L. Bible (BSI)

53 ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೋ? ಆತನೂ ಸಾವಿಗೀಡಾದನು. ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ನಮ್ಮ ಮೂಲಪುರುಷನಾದ ಅಬ್ರಹಾಮನಿಗಿಂತ ನೀನು ದೊಡ್ಡವನೋ? ಅವನೂ ಸತ್ತುಹೋದನು, ಪ್ರವಾದಿಗಳೂ ಸತ್ತುಹೋದರು; ನಿನ್ನನ್ನು ಯಾರೆಂತ ಮಾಡಿಕೊಳ್ಳುತ್ತೀ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ನಮ್ಮತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೆಂದು ಭಾವಿಸಿಕೊಂಡಿರುವೆಯಾ? ಅಬ್ರಹಾಮನು ಸತ್ತುಹೋದನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಹೀಗಿರಲು, ನೀನು ನಿನ್ನನ್ನು ಯಾರೆಂದು ಭಾವಿಸಿಕೊಂಡಿರುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಸತ್ತು ಹೋದ ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು. ನೀನು ನಿನ್ನನ್ನು ಯಾರನ್ನಾಗಿ ಮಾಡಿಕೊಂಡಿರುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 “ಅಮ್ಚೊ ಬಾಬಾ ಅಬ್ರಾಹಾಮ್ ಮರುನ್ ಗೆಲೊ, ತಿಯಾ ಕಾಯ್ ಅಬ್ರಾಮಾಚ್ಯಾನ್ಕಿ ಮೊಟೊ ಕಾಯ್? ಅನಿ ಪ್ರವಾದಿಬಿ ಮರುನ್ ಗೆಲೆ. ತಿಯಾ ಕೊನ್ ಮನುನ್ ಚಿಂತುಲೆ ತಿಯಾ?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:53
14 ತಿಳಿವುಗಳ ಹೋಲಿಕೆ  

ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು.


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.


ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು