Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಆತನನ್ನು ಬಿಡದೆ ಕೇಳುತ್ತಿರುವಾಗ ಆತನು ನೆಟ್ಟಗೆ ಕೂತುಕೊಂಡು ಅವರಿಗೆ - ನಿಮ್ಮಲ್ಲಿ ಪಾಪವಿಲ್ಲದವನು ಯಾರೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದ್ಯ ನಾಯಕರು ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ಆಗ ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪ ಮಾಡಿಲ್ಲದವನು ಆಕೆಯ ಮೇಲೆ ಮೊದಲನೆಯ ಕಲ್ಲನ್ನು ಎಸೆಯಲಿ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಪರಸ್ನೆ ಇಚಾರುಂಗೆತ್ ಇಬೆ ಹೊತ್ತೆ, ತನ್ನಾ ತೊ ನಿಟ್ ಇಬೆ ರ್‍ಹಾಲೊ ಅನಿ ತೆಂಕಾ, “ತುಮ್ಚ್ಯಾತ್ಲೊ ಕೊನ್ ಪಾಪ್ ಕರುಕ್ನಾ ತೊ ಅದ್ದಿ ತಿಕಾ ಗುಂಡೊ ಮಾರುಂದಿ” ಮಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:7
18 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.


ಆಗ ಯೇಸು ತಲೆಯೆತ್ತಿ, “ತಾಯೀ, ಅವರೆಲ್ಲಾ ಎಲ್ಲಿ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು