Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:9 - ಕನ್ನಡ ಸತ್ಯವೇದವು C.L. Bible (BSI)

9 ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಶೆಚ್ ಹೆ ಆಯ್ಕಲ್ಲ್ಯಾ ತನ್ನಾ ತೆನಿ ಮ್ಹಾತಾರ್‍ಯಾಕ್ನಾ ಧರುನ್ ಹರೆಕ್ಲೊ ಎಕೆಕ್ಲೆಚ್ ಸಗ್ಳಿ ಲೊಕಾ ಗೆಲೆ ಥೈ ಇಬೆ ಹೊತ್ತ್ಯಾ ಬಾಯ್ಕೊಮನ್ಸಿಚ್ಯಾ ವಾಂಗ್ಡಾ ಜೆಜು ಎಕ್ಲೊಚ್ ಹುರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:9
22 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ವಿಧಿನಿಯಮಗಳು ಅವರ ಹೃದಯಗಳಲ್ಲಿ ಲಿಖಿತವಾಗಿವೆಯೆಂದು ಅವರ ನಡತೆಯಿಂದಲೇ ವೇದ್ಯವಾಗುತ್ತದೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದೀ; ಇದಕ್ಕೆ ನಿನ್ನ ಮನಸ್ಸೇ ಸಾಕ್ಷಿ.


ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.


“ವ್ಯಭಿಚಾರ ಮಾಡಬಾರದು” ಎಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೇನು? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತೀಯೇನು?


ಆಗ ಯೇಸು ತಲೆಯೆತ್ತಿ, “ತಾಯೀ, ಅವರೆಲ್ಲಾ ಎಲ್ಲಿ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೆ?” ಎಂದು ಕೇಳಿದರು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.


ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ನನ್ನ ಕೊಲೆಗೆಂದು ಯತ್ನಿಸುವವರು ನಾಚಿ ಗಲಿಬಿಲಿಗೊಳ್ಳಲಿ I ನನ್ನಳಿವನು ಕೋರುವಂಥವರು ಲಜ್ಜೆಯಿಂದ ಹಿಂದಿರುಗಲಿ II


ಆಕಾಶವೇ ಅವನ ದೋಷವನು ಪ್ರಕಟಿಸುವುದು ಭೂಲೋಕವೇ ಅವನ ವಿರುದ್ಧ ಸಾಕ್ಷಿನಿಲ್ಲುವುದು.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು.


ಆಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಒಬ್ಬ ಹೆಂಗಸನ್ನು ಅಲ್ಲಿಗೆ ಕರೆತಂದರು; ಅವಳು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಳು.


ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು