Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:35 - ಕನ್ನಡ ಸತ್ಯವೇದವು C.L. Bible (BSI)

35 ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು - ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೂದಿ ನಾಯಕರು ಅವನನ್ನು ಸಭಾಮಂದಿರದಿಂದ ಹೊರಗೆ ಹಾಕಿದ್ದನ್ನು ಯೇಸು ಕೇಳಿ, ಅವನನ್ನು ಕಂಡು, “ನೀನು ಮನುಷ್ಯಪುತ್ರನನ್ನು ನಂಬುತ್ತೀಯಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಹಿತ್ತೆ ಕಾಯ್-ಕಾಯ್ ಹೊಲೆ ಮನ್ತಲಿ ಖಬರ್ ಜೆಜುಕ್ ಗಾವ್ಲಿ, ಮಾನಾ ತೊ ಮಾನುಸ್ ಜೆಜುಕ್ ಭೆಟ್ಲೊ, ತನ್ನಾ ಜೆಜುನ್ ತೆಕಾ,“ಮಾನ್ಸಾಚ್ಯಾಲೆಕಾ ವರ್ತಿ ತಿಯಾ ವಿಶ್ವಾಸ್ ಕರ್‍ತೆ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:35
32 ತಿಳಿವುಗಳ ಹೋಲಿಕೆ  

ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.


ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ?


ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.


ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


“ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.


ಹೆತ್ತವರು ತೊರೆದುಬಿಟ್ಟರೇನು I ಕರ್ತನು ಪೊರೆಯದಿರನು ನನ್ನನು II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.


ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.


(ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು