Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:39 - ಕನ್ನಡ ಸತ್ಯವೇದವು C.L. Bible (BSI)

39 ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ಜೆಜುನ್, “ಮಿಯಾ ನ್ಯಾಯ್ ನಿರ್‍ನಯ್ ಕರುಕ್ ಮನುನ್ ಹ್ಯಾ ಜಗಾತ್ ಯೆಲಾ, ತೆಚೆಸಾಟ್ನಿ ಕುಡ್ಡ್ಯಾನಿ ಬಗುಕ್ ಪಾಜೆ ಅನಿ ಜೆ ಕೊನಾಕ್ ದಿಸ್ತಾ ತೆನಿ ಕುಡ್ಡೆ ಹೊವ್ಕ್ ಪಾಜೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:39
34 ತಿಳಿವುಗಳ ಹೋಲಿಕೆ  

ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


ಉತ್ತರವಾಗಿ ಅವನು, “ಅವರು ಪಾಪಿಯೋ, ಅಲ್ಲವೋ ನಾನರಿಯೆ; ಆದರೆ ನಾನೊಮ್ಮೆ ಕುರುಡನಾಗಿದ್ದೆ; ಈಗಲಾದರೋ ಕಣ್ಣು ಕಾಣಿಸುತ್ತದೆ, ಇಷ್ಟುಮಾತ್ರ ಬಲ್ಲೆ, ಎಂದು ಹೇಳಿದನು.


ನೀವು ತೀರ್ಪುಕೊಡುವುದು ಲೋಕದ ದೃಷ್ಟಿಯಿಂದ, ನಾನಾದರೋ ಯಾರ ಬಗ್ಗೆಯೂ ತೀರ್ಪುಕೊಡಲು ಹೋಗುವುದಿಲ್ಲ.


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


“ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು,” ಎಂದರು.


ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು : ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು