Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:5 - ಕನ್ನಡ ಸತ್ಯವೇದವು C.L. Bible (BSI)

5 ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಈ ಲೋಕದಲ್ಲಿರುವಾಗ, ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಮಿಯಾ ಹ್ಯಾ ಜಗಾತ್ ಅಸಿ ಪತರ್, ಮಿಯಾ ಜಗಾಚೊ ಉಜ್ವೊಡ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:5
17 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


“ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು