Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:13 - ಕನ್ನಡ ಸತ್ಯವೇದವು C.L. Bible (BSI)

13 ಅವರು ಬೆಳೆದು ದೊಡ್ಡವರಾಗುವವರೆಗೂ ಮದುವೆಯಾಗದೆ ಇರುವಿರೋ? ಬೇಡ, ಮಕ್ಕಳೇ, ಸರ್ವೇಶ್ವರ ನನ್ನ ಕೈ ಬಿಟ್ಟಿದ್ದಾರೆ, ನಿಮಗಾಗಿ ನಾನು ಬಹಳ ವಿಷಾದಿಸುತ್ತೇನೆ,” ಎಂದು ಸಮಾಧಾನ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ದೊಡ್ಡವರಾಗುವ ತನಕ ಕಾದಿರುವಿರೋ? ಅಲ್ಲಿಯವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನಗೆ ವಿರೋಧವಾಗಿರುವದರಿಂದ ನಿಮಗೋಸ್ಕರ ಬಹಳ ದುಃಖಪಡುತ್ತೇನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಅವರನ್ನು ಮದುವೆಯಾಗಬೇಕಾದರೆ ಅವರು ಬೆಳೆದು ಪ್ರಾಯಕ್ಕೆ ಬರುವವರೆಗೆ ಕಾದುಕೊಂಡಿರಬೇಕಾಗುತ್ತದೆ. ನೀವು ಗಂಡಂದಿರ ಸಲುವಾಗಿ ಅಷ್ಟುಕಾಲ ಕಾದುಕೊಂಡಿರುವುದು ನನಗಿಷ್ಟವಿಲ್ಲ. ಅದು ನನಗೆ ದುಃಖವನ್ನು ಉಂಟುಮಾಡುತ್ತದೆ. ನಿಮ್ಮ ಬಗ್ಗೆ ನಾನು ತುಂಬಾ ದುಃಖಪಡುತ್ತೇನೆ, ಯೆಹೋವನ ಹಸ್ತವು ನನಗೆ ವಿರುದ್ಧವಾಗಿದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ದೊಡ್ಡವರಾಗುವವರೆಗೂ ಕಾದು ಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಇಲ್ಲ, ನನ್ನ ಮಕ್ಕಳೇ; ಯೆಹೋವ ದೇವರ ಹಸ್ತವು ನನಗೆ ವಿರೋಧವಾಗಿದೆ. ಆದ್ದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:13
11 ತಿಳಿವುಗಳ ಹೋಲಿಕೆ  

ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ.


ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II


ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.


ನಿನ್ನ ಬಾಣಗಳು ನಾಟಿವೆ ನನ್ನೊಳಗೆ I ನಿನ್ನ ಹಸ್ತವು ಎರಗಿದೆ ನನ್ನ ಮೇಲೆ II


ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.


ಸರ್ವೇಶ್ವರನ ಹಸ್ತವು ಅವರಿಗೆ ವಿರೋಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.


ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ ಸಂತಾನಭಾಗ್ಯದ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹಡೆದರೂ


ಅವರು ಇದನ್ನು ಕೇಳಿ ಇನ್ನೂ ಹೆಚ್ಚಾಗಿ ಅತ್ತರು. ಅನಂತರ ಒರ್ಫಾ ಅತ್ತೆಗೆ ಮುತ್ತಿಟ್ಟು ತನ್ನ ಮನೆಗೆ ಹಿಂದಿರುಗಿ ಹೋದಳು. ರೂತಳು ಮಾತ್ರ ಅತ್ತೆಯನ್ನು ಬಿಟ್ಟುಹೋಗಲಿಲ್ಲ.


ಸಿರಿವಂತಳಾಗಿ ಇಲ್ಲಿಂದ ಹೋದೆ. ಗತಿಹೀನಳನ್ನಾಗಿ ಸರ್ವೇಶ್ವರ ನನ್ನನ್ನು ಹಿಂದಕ್ಕೆ ಕರೆತಂದಿದ್ದಾರೆ. ಹೀಗೆ ಸರ್ವಶಕ್ತ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವಾಗ ನೀವು ನನ್ನನ್ನು ನವೊಮಿ ಎಂದು ಕರೆಯುವುದು ಸರಿಯೇ?’ ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು