Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ನವೊಮಿ ರೂತಳಿಗೆ: “ನೋಡು, ನಿನ್ನ ಓರಗಿತ್ತಿಯು ತನ್ನ ಜನಾಂಗದವರ ಬಳಿಗೂ ತನ್ನ ಕುಲದೇವರ ಬಳಿಗೂ ಹಿಂದಿರುಗಿ ಹೋಗಿದ್ದಾಳೆ. ನೀನೂ ಅವಳಂತೆಯೇ ಹೋಗಿಬಿಡು,” ಎಂದು ಒತ್ತಾಯಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೊವೊಮಿಯು ಆಕೆಗೆ, “ನೋಡು, ನಿನ್ನ ಓರಗಿತ್ತಿಯು ಮತ್ತೆ ತನ್ನ ಜನರ ಬಳಿಗೂ ತನ್ನ ದೇವತೆಗಳ ಬಳಿಗೂ ಹೋಗುತ್ತಿದ್ದಾಳೆ. ನೀನೂ ಹಾಗೆಯೇ ಮಾಡು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ನೊವೊಮಿ, “ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರುಗಿ ಹೋದಳು. ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:15
16 ತಿಳಿವುಗಳ ಹೋಲಿಕೆ  

ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ದಾರಿಯಲ್ಲಿ ಎಲೀಯನು ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಎಲೀಷನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾರೆ,” ಎಂದು ಉತ್ತರಕೊಟ್ಟನು. ಬಳಿಕ ಅವರಿಬ್ಬರೂ ಬೇತೇಲಿಗೆ ಹೋದರು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸುಸ್ವಾಮಿ ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.


ಅವರು ಇದನ್ನು ಕೇಳಿ ಇನ್ನೂ ಹೆಚ್ಚಾಗಿ ಅತ್ತರು. ಅನಂತರ ಒರ್ಫಾ ಅತ್ತೆಗೆ ಮುತ್ತಿಟ್ಟು ತನ್ನ ಮನೆಗೆ ಹಿಂದಿರುಗಿ ಹೋದಳು. ರೂತಳು ಮಾತ್ರ ಅತ್ತೆಯನ್ನು ಬಿಟ್ಟುಹೋಗಲಿಲ್ಲ.


ಅದಕ್ಕೆ ರೂತಳು: “ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನು ಅಲ್ಲೇ ವಾಸಿಸುತ್ತೇನೆ.


ಅದಕ್ಕೆ ಅವನು, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ,” ಎಂದು ಉತ್ತರಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು