Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:2 - ಕನ್ನಡ ಸತ್ಯವೇದವು C.L. Bible (BSI)

2 ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಮನುಷ್ಯನಿಗೆ ಎಲೀಮೆಲೆಕನೆಂದೂ ಅವನ ಹೆಂಡತಿಗೆ ನೊವೊವಿುಯೆಂದೂ ಇಬ್ಬರು ಮಕ್ಕಳಿಗೆ ಮಹ್ಲೋನ್, ಕಿಲ್ಯೋನ್ ಎಂದೂ ಹೆಸರು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇವಿುನವರಾದ ಇವರು ಬಂದು ಮೋವಾಬ್ ದೇಶದಲ್ಲಿ ಪ್ರವಾಸವಾಗಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನ ಹೆಂಡತಿಯ ಹೆಸರು “ನೊವೊಮಿ.” ಅವನ ಇಬ್ಬರು ಗಂಡುಮಕ್ಕಳ ಹೆಸರುಗಳು: ಮಹ್ಲೋನ್ ಮತ್ತು ಕಿಲ್ಯೋನ್. ಅವರು ಯೆಹೂದಪ್ರಾಂತದ ಎಫ್ರಾತಿಗೆ ಸೇರಿದ ಬೆತ್ಲೆಹೇಮಿನ ನಿವಾಸಿಗಳು. ಇವರು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋಗಿ ಅಲ್ಲಿಯೇ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಮನುಷ್ಯನ ಹೆಸರು ಎಲೀಮೆಲೆಕನು. ಅವನ ಹೆಂಡತಿಯ ಹೆಸರು ನೊವೊಮಿ. ಅವನ ಪುತ್ರರಲ್ಲಿ ಒಬ್ಬನ ಹೆಸರು ಮಹ್ಲೋನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಬಂದು ಮೋವಾಬ್ ದೇಶದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:2
11 ತಿಳಿವುಗಳ ಹೋಲಿಕೆ  

ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಇಸ್ರಯೇಲರೂ ಫಿಲಿಷ್ಟಿಯರೂ ಎದುರುಬದುರಾಗಿ ವ್ಯೂಹಕಟ್ಟುತ್ತಿದ್ದರು.


ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.


ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.


ಯೆಹೂದದ ಬೆತ್ಲೆಹೇಮಿನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿ,


ಇವರು ಮೋವಾಬ್ ನಾಡಿನಲ್ಲಿ ವಾಸಿಸುತ್ತಿದ್ದಾಗ ಎಲಿಮೆಲೆಕನು ಮರಣ ಹೊಂದಿದನು. ವಿಧವೆಯಾದ ನವೊಮಿ ಇಬ್ಬರು ಗಂಡುಮಕ್ಕಳೊಡನೆ ಅಲ್ಲೇ ಉಳಿದಳು.


ಮಹ್ಲೋನ್ ಮತ್ತು ಕಿಲ್ಯೋನ್ ಸಹ ತೀರಿಹೋದರು. ಹೀಗೆ ನವೊಮಿ ತನ್ನ ಪತಿಯನ್ನೂ ಇಬ್ಬರು ಪುತ್ರರನ್ನೂ ಕಳೆದುಕೊಂಡು ಒಬ್ಬಂಟಿಗಳು ಆದಳು.


ನವೊಮಿಗೆ ಬೋವಜ ಎಂಬ ನೆಂಟನು ಇದ್ದನು. ಅವನು ಐಶ್ವರ್ಯವಂತ ಮತ್ತು ಒಬ್ಬ ಗಣ್ಯ ವ್ಯಕ್ತಿ; ನವೊಮಿಯ ಪತಿ ಎಲಿಮೆಲೆಕನ ಕುಟುಂಬಕ್ಕೆ ಸೇರಿದವನು.


ಆಗ ಬೋವಜನು ಊರಿನ ಹಿರಿಯರೆಲ್ಲರಿಗೆ ಹಾಗು ಅಲ್ಲಿ ನೆರೆದಿದ್ದ ಜನರಿಗೆ, “ಎಲಿಮೆಲೆಕನಿಗೆ ಮತ್ತು ಕಲ್ಯೋನ್, ಮಹ್ಲೋನ್ ಇವರಿಗೆ ಸೇರಿದ್ದ ಆಸ್ತಿ ಎಲ್ಲವನ್ನೂ ನವೊಮಿಯಿಂದ ನಾನು ಕೊಂಡುಕೊಂಡಿದ್ದೇನೆ. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು.


ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು