Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:5 - ಕನ್ನಡ ಸತ್ಯವೇದವು C.L. Bible (BSI)

5 ಮಹ್ಲೋನ್ ಮತ್ತು ಕಿಲ್ಯೋನ್ ಸಹ ತೀರಿಹೋದರು. ಹೀಗೆ ನವೊಮಿ ತನ್ನ ಪತಿಯನ್ನೂ ಇಬ್ಬರು ಪುತ್ರರನ್ನೂ ಕಳೆದುಕೊಂಡು ಒಬ್ಬಂಟಿಗಳು ಆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗೆ ಆ ಸ್ತ್ರೀಯು ಗಂಡನನ್ನೂ ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಳಿಕ ಮಹ್ಲೋನ್ ಮತ್ತು ಕಿಲ್ಯೋನ್ ಸಹ ಸತ್ತುಹೋದರು. ಹೀಗಾಗಿ ನೊವೊಮಿಯು ತನ್ನ ಗಂಡನನ್ನೂ ಇಬ್ಬರು ಗಂಡುಮಕ್ಕಳನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಲ್ಲಿಯೇ ಮಹ್ಲೋನ ಮತ್ತು ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಪುತ್ರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:5
9 ತಿಳಿವುಗಳ ಹೋಲಿಕೆ  

ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು.


ಹುಡುಗರು ಇಬ್ಬರೂ, ಮೋವಾಬ್ಯ ಹುಡುಗಿಯರನ್ನು ವಿವಾಹ ಆದರು. ಒಬ್ಬಳ ಹೆಸರು ಒರ್ಫಾ ಮತ್ತು ಇನ್ನೊಬ್ಬಳು ರೂತ್. ಅವರು ಅಲ್ಲಿ ಸುಮಾರು ಹತ್ತು ವರ್ಷಗಳ ಕಾಲ ವಾಸಮಾಡಿದ ನಂತರ,


ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು