Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ತನ್ನ ಜನರನ್ನು ಕಟಾಕ್ಷಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನೊವೊವಿುಯು ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ಸೊಸೆಯರೊಡನೆ ಹೊರಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದ್ದರಿಂದ ಆಕೆಯು ಮೋವಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ತಮ್ಮ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದರೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:6
27 ತಿಳಿವುಗಳ ಹೋಲಿಕೆ  

ಇದಕ್ಕೊದಗಿಸುವೆನು ಧಾರಾಳ ಸಿರಿಸಂಪತ್ತನು I ಅನ್ನದಿಂದ ತೃಪ್ತಿಪಡಿಸುವೆನಿಲ್ಲಿಯ ದಲಿತರನು II


ಆಹಾರವನೀಯುವನು ಭಯಭಕ್ತಿಯುಳ್ಳವರಿಗೆ I ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ II


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.


“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.


ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.


ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ಎತ್ತುವನಾತ ಬಿದ್ದವರನೆಲ್ಲ I ಉದ್ಧರಿಪನು ಕುಗ್ಗಿದವರನೆಲ್ಲ II


ಸರ್ವೇಶ್ವರನ ಅನುಗ್ರಹ ಹನ್ನಳಿಗೆ ಲಭಿಸಿತು. ಆಕೆಗೆ ಮೂರು ಗಂಡು, ಇಬ್ಬರು ಹೆಣ್ಣು ಮಕ್ಕಳಾದುವು. ಬಾಲಕ ಸಮುವೇಲನು ಸರ್ವೇಶ್ವರನ ಸನ್ನಿಧಿಯಲ್ಲಿ ಬೆಳೆದು ದೊಡ್ಡವನಾದನು.


ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,


ಸರ್ವೇಶ್ವರ ಸ್ವಾಮಿ ತಾವು ಹೇಳಿದ್ದಂತೆಯೇ ಸಾರಳಿಗೆ ನೆರವಾದರು. ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದರು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು.


ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II


ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.


ಮಹ್ಲೋನ್ ಮತ್ತು ಕಿಲ್ಯೋನ್ ಸಹ ತೀರಿಹೋದರು. ಹೀಗೆ ನವೊಮಿ ತನ್ನ ಪತಿಯನ್ನೂ ಇಬ್ಬರು ಪುತ್ರರನ್ನೂ ಕಳೆದುಕೊಂಡು ಒಬ್ಬಂಟಿಗಳು ಆದಳು.


ಆದ್ದರಿಂದ ಅವಳು ಅಲ್ಲಿಗೆ ಹಿಂದಿರುಗಿ ಹೋಗಲು ಸಿದ್ಧತೆಮಾಡಿ ಜುದೇಯಕ್ಕೆ ಹೊರಟಳು. ಸೊಸೆಯರು ಅವಳ ಜೊತೆಯಲ್ಲೆ ಹೋದರು.


ಕಲ್ಲುಕುಪ್ಪೆಯಾಗಿದ್ದರೂ ನಿನ್ನ ಭಕ್ತರಿಗದು ಪ್ರಿಯ I ಅದರ ವಿನಾಶವನು ಕಂಡು ಕರಗಿಹೋಗಿದೆ ಹೃದಯ II


“ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು