ರೂತಳು 1:8 - ಕನ್ನಡ ಸತ್ಯವೇದವು C.L. Bible (BSI)8 ಹೀಗೆ ಹೋಗುತ್ತಿರುವಾಗ ದಾರಿಯಲ್ಲಿ ನವೊಮಿ ಅವರಿಗೆ: “ನೀವು ಇಬ್ಬರೂ ನಿಮ್ಮ ತವರುಮನೆಗಳಿಗೆ ಹಿಂದಿರುಗಿರಿ. ನನಗೂ ಮರಣಹೊಂದಿದ ನನ್ನ ಮಕ್ಕಳಿಗೂ ನೀವು ಒಳಿತು ಮಾಡಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತಿರಿಗಿ ನಿಮ್ಮ ನಿಮ್ಮ ತೌರಮನೆಗೆ ಹೋಗಿರಿ; ನೀವು ನನ್ನನ್ನೂ ಮರಣಹೊಂದಿದ ನನ್ನ ಮಕ್ಕಳನ್ನೂ ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ನೊವೊಮಿ ತನ್ನ ಸೊಸೆಯಂದಿರಿಗೆ, “ನೀವಿಬ್ಬರೂ ನಿಮ್ಮ ತಂದೆತಾಯಿಗಳ ಮನೆಗೆ ಹೋಗಿ. ನೀವು ನನ್ನನ್ನೂ ಸತ್ತುಹೋದ ನನ್ನ ಇಬ್ಬರು ಮಕ್ಕಳನ್ನೂ ತುಂಬ ಪ್ರೀತಿಯಿಂದ ನೋಡಿಕೊಂಡಿದ್ದೀರಿ. ಯೆಹೋವನು ನಿಮಗೆ ಅಷ್ಟೇ ಕೃಪೆಯನ್ನೂ ಪ್ರೀತಿಯನ್ನೂ ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ, “ನೀವು ನಿಮ್ಮ ನಿಮ್ಮ ತಾಯಿಯ ಮನೆಗೆ ತಿರುಗಿ ಹೋಗಿರಿ. ನೀವು ಮರಣ ಹೊಂದಿದ ಪತಿಯರಿಗೂ ನನಗೂ ದಯೆ ತೋರಿಸಿದ ಹಾಗೆಯೇ ಯೆಹೋವ ದೇವರು ನಿಮಗೆ ದಯೆ ತೋರಲಿ. ಅಧ್ಯಾಯವನ್ನು ನೋಡಿ |