Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ನಿಮಗೂ ಹಾಗೆಯೇ ಒಳಿತನ್ನು ಮಾಡಲಿ. ನೀವಿಬ್ಬರೂ ಪುನಃ ಮದುವೆಯಾಗಿ ಸುಖವಾಗಿರುವಂತೆ ಅನುಗ್ರಹಿಸಲಿ!” ಎಂದು ಹರಸಿ ಅವರನ್ನು ಬೀಳ್ಕೊಡುತ್ತಾ ಮುದ್ದಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ವಿಶ್ರಾಂತಿಯಿಂದಿರುವಂತೆ ಯೆಹೋವನು ಅನುಗ್ರಹಿಸಲಿ ಎಂದು ಹೇಳಿ ಅವರನ್ನು ಮುದ್ದಿಟ್ಟಳು. ಆಗ ಅವರು ಗಟ್ಟಿಯಾಗಿ ಅತ್ತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವಿಬ್ಬರೂ ಮದುವೆ ಮಾಡಿಕೊಂಡು ಒಳ್ಳೆಯ ಕುಟುಂಬವನ್ನು ಹೊಂದಿಕೊಳ್ಳಲು ಯೆಹೋವನು ನಿಮಗೆ ಸಹಾಯಮಾಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಹೇಳಿ ತನ್ನ ಸೊಸೆಯಂದಿರಿಗೆ ಮುದ್ದಿಟ್ಟಳು. ಅವರೆಲ್ಲರೂ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಮದುವೆಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದುವಂತೆ, ಯೆಹೋವ ದೇವರು ಆಶೀರ್ವದಿಸಲಿ,” ಎಂದು ಹೇಳಿದಳು. ನಂತರ ನೊವೊಮಿಯು ಅವರಿಗೆ ಮುದ್ದಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:9
8 ತಿಳಿವುಗಳ ಹೋಲಿಕೆ  

ಒಂದು ದಿನ ನವೊಮಿ ರೂತಳಿಗೆ, “ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?


ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟನು. ತರುವಾಯ ಅವರು ಅವನ ಸಂಗಡ ಮಾತನಾಡತೊಡಗಿದರು.


ಅನಂತರ ರಾಖೇಲಳಿಗೆ ಮುದ್ದಿಟ್ಟನು; ಸಂತೋಷ ಉಕ್ಕಿಬಂದು ಗಟ್ಟಿಯಾಗಿ ಅತ್ತನು.


ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.


ಹೀಗೆ ಹೋಗುತ್ತಿರುವಾಗ ದಾರಿಯಲ್ಲಿ ನವೊಮಿ ಅವರಿಗೆ: “ನೀವು ಇಬ್ಬರೂ ನಿಮ್ಮ ತವರುಮನೆಗಳಿಗೆ ಹಿಂದಿರುಗಿರಿ. ನನಗೂ ಮರಣಹೊಂದಿದ ನನ್ನ ಮಕ್ಕಳಿಗೂ ನೀವು ಒಳಿತು ಮಾಡಿದಿರಿ.


ಆದರೆ ಅವರು, “ಇಲ್ಲಮ್ಮಾ, ನಿಮ್ಮನ್ನು ಬಿಟ್ಟು ಹೋಗಲಾರೆವು. ನಾವೂ ನಿಮ್ಮ ಜೊತೆಯಲ್ಲಿಯೇ ನಿಮ್ಮ ಸ್ವಜನರ ಬಳಿಗೆ ಬರುತ್ತೇವೆ,” ಎಂದು ಅಳಲಾರಂಭಿಸಿದರು.


ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಬೀಳ್ಕೊಡಲೂ ಆಗದಂತೆ ಮಾಡಿದೆ. ನೀನು ಮಾಡಿದ್ದು ಎಂಥ ಹುಚ್ಚು ಕೆಲಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು