Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:1 - ಕನ್ನಡ ಸತ್ಯವೇದವು C.L. Bible (BSI)

1 ನವೊಮಿಗೆ ಬೋವಜ ಎಂಬ ನೆಂಟನು ಇದ್ದನು. ಅವನು ಐಶ್ವರ್ಯವಂತ ಮತ್ತು ಒಬ್ಬ ಗಣ್ಯ ವ್ಯಕ್ತಿ; ನವೊಮಿಯ ಪತಿ ಎಲಿಮೆಲೆಕನ ಕುಟುಂಬಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೊವೊವಿುಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಒಬ್ಬ ಧನವಂತನಾದ ಸಂಬಂಧಿಯಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆತ್ಲೆಹೇಮಿನಲ್ಲಿ ಬೋವಜನೆಂಬ ಒಬ್ಬ ಐಶ್ವರ್ಯವಂತನಿದ್ದನು. ಬೋವಜನು ಎಲೀಮೆಲೆಕನ ಕುಟುಂಬದವನಾಗಿದ್ದು ನೊವೊಮಿಯ ಸಮೀಪದ ಸಂಬಂಧಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೊವೊಮಿಯ ಗಂಡ ಎಲೀಮೆಲೆಕನ ಗೋತ್ರದಲ್ಲಿ ಬೋವಜ ಎಂಬ ಹೆಸರುಳ್ಳ ಪ್ರಬಲ ಮತ್ತು ಧನವಂತನಾಗಿರುವ ಬಂಧುವಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:1
13 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹತ್ತಿರದ ನೆಂಟನಾಗಿರುವುದೇನೋ ನಿಜ. ನಿನ್ನನ್ನು ಸಲಹುವ ಮೈದುನ ಕರ್ತವ್ಯ ನನ್ನದು. ಆದರೆ ನನಗಿಂತಲೂ ಹತ್ತಿರದ ನೆಂಟನೊಬ್ಬನಿದ್ದಾನೆ.


ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು.


ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ,


ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು.


ದಾವೀದ್ ಜೆಸ್ಸೆಯನಿಗೆ, ಜೆಸ್ಸೆಯ ಓಬೇದನಿಗೆ, ಓಬೇದ್ ಬೋವಜನಿಗೆ, ಬೋವಜ್ ಸಲ್ಮೋನನಿಗೆ, ಸಲ್ಮೋನ್ ನಹಸ್ಸೋನನಿಗೆ ಹುಟ್ಟಿದರು.


ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.


ಅಸ್ಸೀರಿಯದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡನು. ಆ ಹಣ ಸಿಕ್ಕಿದ ನಂತರ ಅಸ್ಸೀರಿಯದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು