Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:11 - ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಬೋವಜನು, “ನಿನ್ನ ಪತಿ ತೀರಿಹೋದಂದಿನಿಂದ ನೀನು ಅತ್ತೆಗಾಗಿ ಮಾಡಿದ್ದ ಎಲ್ಲವನ್ನೂ ಕುರಿತು ಕೇಳಿದ್ದೇನೆ. ನೀನು ಹೇಗೆ ನಿನ್ನ ತಂದೆತಾಯಿಗಳನ್ನು ಮತ್ತು ಸ್ವಂತ ನಾಡನ್ನು ಬಿಟ್ಟು, ಅಪರಿಚಿತರಾದ ಜನರ ಮಧ್ಯೆ ವಾಸಿಸಲು ಬಂದಿರುವೆ ಎಂಬುದು ಸಹ ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬೋವಜನು - ನಿನ್ನ ಗಂಡನು ಸತ್ತ ಮೇಲೆ ನೀನು ಅತ್ತೆಯನ್ನು ಪ್ರೀತಿಸಿ ತಂದೆತಾಯಿಗಳನ್ನೂ ಸ್ವದೇಶವನ್ನೂ ಬಿಟ್ಟು ನೀನು ಈವರೆಗೂ ಅರಿಯದ ಜನರ ಬಳಿಗೆ ಬಂದಿರುವಿಯೆಂಬದು ನನಗೆ ಚೆನ್ನಾಗಿ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಬೋವಜನು ಅವಳಿಗೆ ಉತ್ತರವಾಗಿ, “ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿದ್ದೆಲ್ಲವೂ ನೀನು ನಿನ್ನ ತಂದೆತಾಯಿಗಳನ್ನೂ ನೀನು ಹುಟ್ಟಿದ ದೇಶವನ್ನೂ ಬಿಟ್ಟು ನೀನು ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:11
15 ತಿಳಿವುಗಳ ಹೋಲಿಕೆ  

ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.


ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ಎಲೌ ಕುವರಿಯೇ, ಕೇಳು, ಎನ್ನ ಮಾತಿಗೆ ಕಿವಿಗೊಡು I ನಿನ್ನ ಜನರನು, ತೌರು ಮನೆಯನು ಮರೆತುಬಿಡು II


‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?


ಆಗ ನವೊಮಿ, “ಮಕ್ಕಳೇ, ನೀವು ಹಿಂತಿರುಗುವುದು ಒಳ್ಳೆಯದು. ನನ್ನ ಸಂಗಡ ಏಕೆ ಬರಬೇಕೆಂದಿರುವಿರಿ? ನೀವು ಪುನಃ ಮದುವೆಯಾಗುವುದಕ್ಕೆ ನನಗೆ ಬೇರೆ ಮಕ್ಕಳಿರುವರೇ?


ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಈ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು.


ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು.


ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವನ್ನು ದಾವೀದನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು