Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:15 - ಕನ್ನಡ ಸತ್ಯವೇದವು C.L. Bible (BSI)

15 ಅವಳು ಪುನಃ ಹಕ್ಕಲು ತೆನೆಗಳನ್ನು ಆರಿಸಿಕೊಳ್ಳಲು ಹೋದಾಗ, ಬೋವಜನು ತನ್ನ ಆಳುಗಳಿಗೆ, “ಸಿವುಡುಗಳ ಮಧ್ಯದಲ್ಲೂ ಅವಳು ತೆನೆಗಳನ್ನು ಆರಿಸಿಕೊಳ್ಳಲಿ; ಅಡ್ಡಿಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತರುವಾಯ ತಿರಿಗಿ ಹಕ್ಕಲಾಯುವದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ - ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ, ಬೈಯಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ರೂತಳು ಎದ್ದು ಪುನಃ ಕೆಲಸಕ್ಕೆ ಹೋದಳು. ಆಗ ಬೋವಜನು ತನ್ನ ಸೇವಕರಿಗೆ, “ರೂತಳು ಕಣದಲ್ಲಿರುವ ಸಿವುಡುಗಳ ಸುತ್ತಲೂ ಹಕ್ಕಲು ಆರಿಸಿಕೊಳ್ಳಲಿ; ಅವಳನ್ನು ತಡೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವಜನು ತನ್ನ ಸೇವಕರಿಗೆ ಆಜ್ಞಾಪಿಸಿ, “ಇವಳು ಕೊಯ್ದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ಬೈಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:15
5 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ನಿಮ್ಮ ನಾಡಿನ ಹೊಲ ಕೊಯ್ಯುವಾಗ ಮೂಲೆ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು, ಹಕ್ಕಲನ್ನು ಆಯಬಾರದು, ಬಡವರಿಗಾಗಿ ಹಾಗು ಪರದೇಶಿಗಳಿಗಾಗಿ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.


ಊಟದ ಸಮಯದಲ್ಲಿ ಬೋವಜನು ರೂತಳನ್ನು ಕರೆದು, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ದ್ರಾಕ್ಷಾರಸದಲ್ಲಿ ಅದ್ದಿ ತಿನ್ನು,” ಎಂದನು. ಆಕೆ ಕೊಯ್ಯುವವರ ಸಂಗಡ ಕುಳಿತುಕೊಂಡಳು. ಇದಲ್ಲದೆ ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಅವಳು ತೃಪ್ತಿಯಾಗಿ ಊಟಮಾಡಿ ಇನ್ನೂ ಸ್ವಲ್ಪ ಉಳಿಸಿಕೊಂಡಳು.


ನೀವು ಕೊಯ್ಯುವಾಗ ಕೆಲವು ತೆನೆಗಳಿಂದ ಕಟ್ಟುಗಳಿಂದ ಕಿತ್ತು ಕೆಳಗೆ ಹಾಕಿರಿ. ಅವಳು ಆಯ್ದುಕೊಳ್ಳಲಿ; ಯಾರೂ ಅವಳನ್ನು ಗದರಿಸಬೇಡಿ,” ಎಂದು ಆಜ್ಞೆಯಿತ್ತನು.


“ನೀವು ಹೊಲಕೊಯ್ಯುವಾಗ ಮೂಲೆಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು; ಕೊಯ್ದಾದ ಮೇಲೆ ಹಕ್ಕಲಾಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು