ರೂತಳು 2:18 - ಕನ್ನಡ ಸತ್ಯವೇದವು C.L. Bible (BSI)18 ಅದನ್ನು ತೆಗೆದುಕೊಂಡು ಊರೊಳಕ್ಕೆ ಹೋಗಿ ತನ್ನ ಅತ್ತೆಗೆ ತೋರಿಸಿದಳು. ಅಂತೆಯೇ ತನ್ನ ಆಹಾರದಿಂದ ಉಳಿಸಿಟ್ಟಿದ್ದನ್ನು ತನ್ನ ಅತ್ತೆಗೆ ಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ದದು ಸಂಗ್ರಹಿಸಿದ್ದನ್ನು ತನ್ನ ಅತ್ತೆಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತೆಗೆ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು ಅತ್ತೆಗೆ ತೋರಿಸಿ ತಾನು ಉಳಿಸಿಟ್ಟಿದ್ದನ್ನು ತೆಗೆದುಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ರೂತಳು ತನ್ನ ಅತ್ತೆಗೆ ತೋರಿಸುವುದಕ್ಕಾಗಿ ಆ ಧಾನ್ಯವನ್ನು ಪಟ್ಟಣಕ್ಕೆ ತೆಗೆದುಕೊಂಡು ಹೋದಳು. ಇದಲ್ಲದೆ ತಾನು ಮಧ್ಯಾಹ್ನ ಊಟ ಮಾಡುವಾಗ ತೆಗೆದಿಟ್ಟ ಆಹಾರವನ್ನು ಸಹ ಅವಳಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಬಂದಳು. ಅವಳು ಹಕ್ಕಲಾದುಕೊಂಡಿದ್ದನ್ನು ಅವಳ ಅತ್ತೆಯು ಕಂಡಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿ |