Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:4 - ಕನ್ನಡ ಸತ್ಯವೇದವು C.L. Bible (BSI)

4 ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಬೋವಜನು ಬೇತ್ಲೆಹೇವಿುನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ - ಯೆಹೋವನು ನಿಮ್ಮ ಸಂಗಡ ಇರಲಿ ಅಂದನು. ಅವರು - ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:4
21 ತಿಳಿವುಗಳ ಹೋಲಿಕೆ  

ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ದೇವದೂತನು ಆಕೆಯ ಬಳಿಗೆ ಬಂದು, “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು.


ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.


ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು.


ಬೋವಜನು ಮೇಸ್ತ್ರಿಯನ್ನು ಕರೆದು, “ಇವಳು ಯಾವ ಮನೆಯ ಹೆಣ್ಣು?” ಎಂದು ವಿಚಾರಿಸಿದನು.


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ!


ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು.


ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.


ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.


ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು