ರೂತಳು 2:7 - ಕನ್ನಡ ಸತ್ಯವೇದವು C.L. Bible (BSI)7 ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ಮಧ್ಯೆ ಹಕ್ಕಲಾಯ್ದುಕೊಳ್ಳುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲೇ ಇದ್ದಾಳೆ. ಸದ್ಯಕ್ಕೆ ನೆರಳಿನಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವಳು - ಕೊಯ್ಯುವವರ ಹಿಂದಿನಿಂದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ತನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಈಕೆಯು ಮನೆಯಲ್ಲಿ ಹೆಚ್ಚಾಗಿ ಕಾಲ ಕಳೆಯಲಿಲ್ಲ; ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವಳು ಇಂದು ಬೆಳಗಿನ ಜಾವದಲ್ಲಿ ಬಂದು, ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾರಿಸಿಕೊಳ್ಳಬಹುದೇ? ಎಂದು ನನ್ನನ್ನು ಕೇಳಿದಳು. ಆಗಿನಿಂದ ಅವಳು ಆ ಕೆಲಸವನ್ನು ಮಾಡುತ್ತಿದ್ದಾಳೆ. ಆಕೆ ಸ್ವಲ್ಪ ಹೊತ್ತು ಮಾತ್ರ ಆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡಳು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇವಳು, ‘ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ನಡುವೆ ನಾನು ಹಕ್ಕಲಾರಿಸಿಕೊಳ್ಳುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೇಳಿಕೊಂಡಳು. ಸ್ವಲ್ಪ ಸಮಯ ನೆರಳಿನಲ್ಲಿ ವಿಶ್ರಮಿಸಿಕೊಂಡು, ಬೆಳಗಿನಿಂದ ಈವರೆಗೂ ಇಲ್ಲಿಯೇ ಇದ್ದಾಳೆ,” ಎಂದನು. ಅಧ್ಯಾಯವನ್ನು ನೋಡಿ |