Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:8 - ಕನ್ನಡ ಸತ್ಯವೇದವು C.L. Bible (BSI)

8 ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಬೋವಜನು ರೂತಳಿಗೆ - ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇದ್ದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಬೋವಜನು ರೂತಳಿಗೆ, “ಮಗಳೇ, ನೀನು ನನ್ನ ಹೊಲದಲ್ಲಿಯೇ ಧಾನ್ಯವನ್ನು ಶೇಖರಿಸು. ನೀನು ಬೇರೆಯವರ ಹೊಲಕ್ಕೆ ಹೋಗುವ ಅವಶ್ಯಕತೆಯಿಲ್ಲ. ನನ್ನ ಹೆಣ್ಣಾಳುಗಳ ಹಿಂದೆಯೇ ನೀನು ಹೋಗುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:8
11 ತಿಳಿವುಗಳ ಹೋಲಿಕೆ  

ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಆದರೆ, ಏಲಿ, “ಮಗನೇ, ಸಮುವೇಲನೇ”, ಎಂದು ಕರೆದಾಗ ಅವನು, “ಇಗೋ, ಇದ್ದೇನೆ,” ಎಂದನು.


ಸರ್ವೇಶ್ವರ ಪುನಃ, “ಸಮುವೇಲನೇ,” ಎಂದು ಕರೆದರು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಅವನು, “ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು.


ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ಮಧ್ಯೆ ಹಕ್ಕಲಾಯ್ದುಕೊಳ್ಳುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲೇ ಇದ್ದಾಳೆ. ಸದ್ಯಕ್ಕೆ ನೆರಳಿನಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ,” ಎಂದು ಉತ್ತರಕೊಟ್ಟನು.


ಅವರು ಎಲ್ಲಿ ಪೈರು ಕೊಯ್ಯುತ್ತಾರೋ ಅವರ ಹಿಂದೆ ಹೋಗಿ ತೆನೆಗಳನ್ನು ಆರಿಸಿಕೊ. ನಿನಗೆ ಯಾರೂ ತೊಂದರೆ ಕೊಡಬಾರದೆಂದು ನನ್ನ ಆಳುಗಳಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಆಳುಗಳು ತುಂಬಿಸಿರುವ ನೀರಿನ ಬಾನೆಗಳಿಂದ ಕುಡಿ,” ಎಂದನು.


“ನೀವು ಹೊಲಕೊಯ್ಯುವಾಗ ಮೂಲೆಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು; ಕೊಯ್ದಾದ ಮೇಲೆ ಹಕ್ಕಲಾಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು