Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:9 - ಕನ್ನಡ ಸತ್ಯವೇದವು C.L. Bible (BSI)

9 ಅವರು ಎಲ್ಲಿ ಪೈರು ಕೊಯ್ಯುತ್ತಾರೋ ಅವರ ಹಿಂದೆ ಹೋಗಿ ತೆನೆಗಳನ್ನು ಆರಿಸಿಕೊ. ನಿನಗೆ ಯಾರೂ ತೊಂದರೆ ಕೊಡಬಾರದೆಂದು ನನ್ನ ಆಳುಗಳಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಆಳುಗಳು ತುಂಬಿಸಿರುವ ನೀರಿನ ಬಾನೆಗಳಿಂದ ಕುಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಆಳುಗಳು ಕೊಯ್ಯುವದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ದಾಹವಾದರೆ ನನ್ನ ಸೇವಕರೇ ನೀರು ತಂದು ತುಂಬಿಸಿದ ನೀರಿನ ಪಾತ್ರೆಗಳ ಬಳಿಗೆ ಹೋಗಿ ಕುಡಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಯಾವ ಹೊಲಕ್ಕೆ ಹೋಗುತ್ತಾರೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೂಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇದುವ ನೀರನ್ನೇ ಕುಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ. ಅವರ ಹಿಂದೆಯೇ ಹೋಗು, ಯಾರೂ ನಿನ್ನನ್ನು ಮುಟ್ಟದಹಾಗೆ ಅವರಿಗೆ ಆಜ್ಞಾಪಿಸಿದ್ದೇನೆ. ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ನನ್ನ ಸೇವಕರು ಸೇದಿಟ್ಟ ನೀರನ್ನು ಕುಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:9
11 ತಿಳಿವುಗಳ ಹೋಲಿಕೆ  

ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ನೀವು ಬರೆದು ಕೇಳಿರುವ ವಿಷಯಗಳ ಬಗ್ಗೆ ನಾನು ಹೇಳುವುದೇನೆಂದರೆ: ಒಬ್ಬ ವ್ಯಕ್ತಿ ಸ್ತ್ರೀಯೊಡನೆ ಲೈಂಗಿಕ ಸಂಪರ್ಕವನ್ನು ಇಟ್ಟುಕೊಳ್ಳದಿರುವುದು ಒಳ್ಳೆಯದು.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು.


“ನಾನಭಿಷೇಕಿಸಿದವರನಿದೋ ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II


ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ.


ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು.


ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು