Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:1 - ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ನವೊಮಿ ರೂತಳಿಗೆ, “ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನವೊಮಿಯು ಸೊಸೆಗೆ, “ನನ್ನ ಮಗಳೇ, ನಿನಗೆ ಒಳ್ಳೆಯದಾಗುವುದಕ್ಕಾಗಿ, ನೀನು ಗೃಹಿಣಿಯಾಗಿ ಸುಖದಿಂದಿರುವುದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೊವೊವಿುಯು ಸೊಸೆಗೆ - ನನ್ನ ಮಗಳೇ, ನೀನು ಗೃಹಿಣಿಯಾಗಿ ಸುಖದಿಂದಿರುವದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರೂತಳ ಅತ್ತೆಯಾದ ನೊವೊಮಿಯು ಅವಳಿಗೆ, “ನನ್ನ ಮಗಳೇ, ನೀನು ಮದುವೆಮಾಡಿಕೊಂಡು ಕುಟುಂಬಸ್ತಳಾಗಿರುವುದು ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ದಿನ ರೂತಳ ಅತ್ತೆ ನೊವೊಮಿಯು ಅವಳಿಗೆ, “ನನ್ನ ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ, ನಾನು ನಿನಗೆ ವಿಶ್ರಾಂತಿ ಸ್ಥಳ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:1
10 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನಿಮಗೂ ಹಾಗೆಯೇ ಒಳಿತನ್ನು ಮಾಡಲಿ. ನೀವಿಬ್ಬರೂ ಪುನಃ ಮದುವೆಯಾಗಿ ಸುಖವಾಗಿರುವಂತೆ ಅನುಗ್ರಹಿಸಲಿ!” ಎಂದು ಹರಸಿ ಅವರನ್ನು ಬೀಳ್ಕೊಡುತ್ತಾ ಮುದ್ದಿಟ್ಟಳು.


ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II


ಒಬ್ಬನು ತನಗೆ ನಿಶ್ಚಿತವಾದ ಕನ್ಯೆಯೊಡನೆ ಅನುಚಿತ ರೀತಿಯಲ್ಲಿ ವರ್ತಿಸುತ್ತಿರಬಹುದು; ಅವನಿಗೆ ಸಂಯಮ ತಪ್ಪುವಂತಿದ್ದರೆ, ತಾನು ಆಶಿಸುವಂತೆ ಅವನು ಮದುವೆಮಾಡಿಕೊಳ್ಳಲಿ, ಅದು ಪಾಪವಲ್ಲ.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು.


ಅದರಂತೆಯೆ ರೂತಳು ಜವೆಗೋದಿ ಮತ್ತು ಗೋದಿಯ ಸುಗ್ಗಿ ಮುಗಿಯುವವರೆಗೂ ಬೋವಜನ ಹೆಣ್ಣಾಳುಗಳ ಸಂಗಡ ತೆನೆಗಳನ್ನು ಆಯ್ದುಕೊಳ್ಳುತ್ತಾ ಇದ್ದಳು. ಅತ್ತೆಯ ಮನೆಯಲ್ಲೇ ವಾಸಿಸುತ್ತಿದ್ದಳು.


ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು