ರೂತಳು 3:10 - ಕನ್ನಡ ಸತ್ಯವೇದವು C.L. Bible (BSI)10 ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಅವನು - ನನ್ನ ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರನ್ನು ನೋಡಿ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮುಂಚಿಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಬೋವಜನು, “ಯುವತಿಯೇ, ಯೆಹೋವನು ನಿನಗೆ ದಯೆತೋರಲಿ. ನೀನು ನನ್ನ ಮೇಲೆ ತುಂಬಾ ಕರುಣೆಯನ್ನು ತೋರಿರುವೆ. ನೀನು ಮೊದಲು ನೊವೊಮಿಗೆ ತೋರಿದ ಕರುಣೆಗಿಂತಲೂ ಹೆಚ್ಚಿನ ಕರುಣೆಯನ್ನು ನನಗೆ ತೋರಿರುವೆ. ನೀನು ಒಬ್ಬ ತರುಣನನ್ನು ಅವನು ಬಡವನಾಗಿರಲಿ ಅಥವಾ ಶ್ರೀಮಂತನಾಗಿರಲಿ ಮದುವೆಗಾಗಿ ಆರಿಸಿಕೊಳ್ಳಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ. ಅಧ್ಯಾಯವನ್ನು ನೋಡಿ |