Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ನವೊಮಿ, “ಮಗಳೇ, ಇದರ ಫಲಿತಾಂಶ ಏನಾಗುವುದೆಂದು ಗೊತ್ತಾಗುವವರೆಗೂ ತಾಳ್ಮೆಯಿಂದಿರು. ಬೋವಜನು ಈ ವಿಷಯವನ್ನು ಇತ್ಯರ್ಥ ಮಾಡುವವರೆಗೆ ಸುಮ್ಮನಿರಲಾರನು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅತ್ತೆಯು “ನನ್ನ ಮಗಳೇ, ಈ ಕಾರ್ಯವು ಏನಾಗುವುದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ವಿಷಯವನ್ನು ಇತ್ಯರ್ಥ ಮಾಡುವವರೆಗೂ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅತ್ತೆಯು - ನನ್ನ ಮಗಳೇ, ಈ ಕಾರ್ಯವು ಹೇಗಾಗುವದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ಹೊತ್ತು ಅದನ್ನು ಇತ್ಯರ್ಥ ಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೊವೊಮಿಯು, “ನನ್ನ ಮಗಳೇ, ಈ ಕಾರ್ಯದ ಫಲಿತಾಂಶ ಗೊತ್ತಾಗುವವರೆಗೂ ತಾಳ್ಮೆಯಿಂದಿರು. ಈ ಹೊತ್ತು ಅದನ್ನು ಇತ್ಯರ್ಥಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ನೊವೊಮಿ, “ನನ್ನ ಮಗಳೇ, ಈ ಕಾರ್ಯ ಏನಾಗುವುದೋ, ಎಂದು ನೀನು ತಿಳಿಯುವವರೆಗೂ ಸುಮ್ಮನೆ ಇರು. ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವವರೆಗೂ ವಿಶ್ರಾಂತಿಯಲ್ಲಿ ಇರಲಾರನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:18
5 ತಿಳಿವುಗಳ ಹೋಲಿಕೆ  

ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ಇದಲ್ಲದೆ, ಅತ್ತೆಯ ಬಳಿಗೆ ಬರಿಗೈಯಲ್ಲಿ ಹೋಗಬೇಡ, ಎಂದು ಹೇಳಿ ಇಷ್ಟೊಂದು ಜವೆಗೋದಿಯನ್ನು ಕೊಟ್ಟನು,” ಎಂದು ಹೇಳಿದಳು.


ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು