ರೂತಳು 3:6 - ಕನ್ನಡ ಸತ್ಯವೇದವು C.L. Bible (BSI)6 ಅದರಂತೆ ರೂತಳು ಕಣಕ್ಕೆ ಹೋಗಿ ಅತ್ತೆ ಹೇಳಿಕೊಟ್ಟಂತೆ ಮಾಡಿದಳು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6-7 ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಮಲಗಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರೂತಳು ಕಣಕ್ಕೆ ಹೋದಳು. ಅತ್ತೆಯು ಹೇಳಿದಂತೆಯೇ ರೂತಳು ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದಳು. ಅಧ್ಯಾಯವನ್ನು ನೋಡಿ |
ಇತ್ತ ಬೋವಜನು ಅನ್ನಪಾನ ಮಾಡಿ ಸಂತುಷ್ಟನಾಗಿದ್ದನು. ಅನಂತರ ಜವೆಗೋದಿಯ ರಾಶಿಯ ಬಳಿ ಹೋಗಿ ಮಲಗಿಕೊಂಡನು. ರೂತಳು ನಿಶ್ಯಬ್ಧವಾಗಿ ಅವನ ಬಳಿಗೆ ಹೋದಳು. ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ಮೆತ್ತಗೆ ಸರಿಸಿ, ಅಲ್ಲೇ ಮಲಗಿಕೊಂಡಳು. ಸುಮಾರು ನಡುರಾತ್ರಿಯಲ್ಲಿ ಅವನಿಗೆ ತಟ್ಟನೆ ಎಚ್ಚರವಾಯಿತು. ಬಗ್ಗಿ ನೋಡಿದಾಗ ಸ್ತ್ರೀಯೊಬ್ಬಳು ಪಾದಗಳ ಬಳಿ ಮಲಗಿರುವುದನ್ನು ಕಂಡು ಚಕಿತಗೊಂಡು, “ನೀನು ಯಾರು?” ಎಂದು ಕೇಳಿದನು.