Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:12 - ಕನ್ನಡ ಸತ್ಯವೇದವು C.L. Bible (BSI)

12 ಬೆತ್ಲೆಹೇಮಿನಲ್ಲಿ ಘನವಂತನಾಗು! ಆ ಯುವತಿಯ ಮುಖಾಂತರ ಸರ್ವೇಶ್ವರ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆತನವು, ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆತನದಂತೆ ಪ್ರಖ್ಯಾತವಾಗಲಿ!” ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಾಮಾರಳು ಯೆಹೂದನ ಮಗನಾದ ಪೆರೆಚನಿಗೆ ಜನ್ಮಕೊಟ್ಟಳು. ಅದರಿಂದ ಅವನ ಕುಟುಂಬವು ಅಭಿವೃದ್ಧಿ ಹೊಂದಿತು. ಹಾಗೆಯೇ ರೂತಳಿಂದ ಯೆಹೋವನು ನಿನಗೆ ಹಲವಾರು ಮಕ್ಕಳನ್ನು ಕೊಡಲಿ; ಅವನಂತೆಯೇ ನಿನ್ನ ಕುಟುಂಬವೂ ಅಭಿವೃದ್ಧಿ ಹೊಂದಲಿ” ಎಂದು ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ಹುಡುಗಿಯಿಂದ ಯೆಹೋವ ದೇವರು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯು ತಾಮಾರಳು ಯೆಹೂದನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:12
8 ತಿಳಿವುಗಳ ಹೋಲಿಕೆ  

ಆದರೆ ಅದು ಕೈಯನ್ನು ಹಿಂದಕ್ಕೆ ತೆಗೆದುಕೊಂಡಿತು. ಅದರೊಡನೆ ಇದ್ದ ಇನ್ನೊಂದು ಕೂಸು ಹೊರಗೆ ಬಂದಿತು. ಇದನ್ನು ಕಂಡ ಸೂಲಗಿತ್ತಿ, “ನೀನು ಕಿತ್ತುಕೊಂಡು ಬಂದಿರುತ್ತೀಯಲ್ಲಾ,” ಎಂದಳು. ಈ ಕಾರಣ ಆ ಮಗುವಿಗೆ ‘ಪೆರೆಚ್’ ಎಂದು ಹೆಸರಾಯಿತು.


ಯೆಹೂದನಿಗೆ ಅವನ ಸೊಸೆ ತಾಮಾರಳಿಂದ ಪೆರೆಜ್ ಹಾಗೂ ಜೆರಹ ಎಂಬ ಮಕ್ಕಳು ಜನಿಸಿದರು. ಯೆಹೂದನ ಮಕ್ಕಳು ಒಟ್ಟು ಐದು ಮಂದಿ.


ಎಲ್ಕಾನನಿಗೆ ಏಲಿ, “ನೀನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ನಿನಗೆ ಬೇರೆ ಮಕ್ಕಳಾಗಲಿ!” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.


ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು.


ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.


ಪೆರೆಚನಿಂದ ದಾವೀದನವರೆಗಿನ ವಂಶಾವಳಿ: ಪೆರೆಚನಿಗೆ ಹೆಚ್ರೋನನು, ಹೆಚ್ರೋನನಿಗೆ ರಾಮನು, ರಾಮನಿಗೆ ಅಮಿನದಾಬನು ಹುಟ್ಟಿದರು. ಅಮಿನದಾಬನಿಗೆ ನಹಶೋನ, ನಹಶೋನನಿಗೆ ಸಲ್ಮೋನ್, ಸಲ್ಮೋನನಿಗೆ ಬೋವಜನು ಹುಟ್ಟಿದರು. ಬೋವಜನಿಗೆ ಓಬೇದ್, ಓಬೇದನಿಗೆ ಜೆಸ್ಸಯ, ಜೆಸ್ಸಯನಿಗೆ ದಾವೀದ ಹುಟ್ಟಿದರು.


ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು