Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಬೋವಜನು, “ನೀನು ಆ ಹೊಲವನ್ನು ಕೊಂಡುಕೊಳ್ಳುವುದಾದರೆ, ಅವಳ ಸೊಸೆಯಾದ ಮೋವಾಬದ ರೂತಳನ್ನು ನೀನು ಮದುವೆಯಾಗಬೇಕು. ಆಗ ಆ ಹೊಲದ ಖಾತೆ ಗತಿಸಿದ ಮಗನ ಹೆಸರಿನಲ್ಲೇ ಉಳಿಯುತ್ತದೆ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಬೋವಜನು - ನೀನು ನೊವೊವಿುಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ ಹೊಲದ ಖಾತೆಯು ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುವಂತೆ ಅವನ ಹೆಂಡತಿಯೂ ಮೋವಾಬ್ ಸ್ತ್ರೀಯೂ ಆದ ರೂತಳನ್ನೂ ತೆಗೆದುಕೊಳ್ಳಬೇಕು ಎಂದು ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದಕ್ಕೆ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಂಡರೆ ಸತ್ತವನ ಹೆಂಡತಿಯೂ ಮೋವಾಬ್ಯಳೂ ಆಗಿರುವ ರೂತಳನ್ನು ಸಹ ನೀನು ಮದುವೆಯಾಗಬೇಕು. ರೂತಳಿಗೆ ಜನಿಸುವ ಮಗನು ಆ ಹೊಲಕ್ಕೆ ಹಕ್ಕುದಾರನಾಗುವನು. ಹೀಗೆ ಈ ಭೂಮಿಯು ಸತ್ತು ಹೋದವನ ಕುಟುಂಬದಲ್ಲಿಯೇ ಇದ್ದು ಅವನ ಹೆಸರಿನಲ್ಲಿಯೇ ಮುಂದುವರಿಯುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ತೆಗೆದುಕೊಳ್ಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:5
6 ತಿಳಿವುಗಳ ಹೋಲಿಕೆ  

ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ.


ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನ ಧರ್ಮಕ್ಕನುಸಾರ ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು,” ಎಂದನು.


“ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ?


ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ, ‘ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವುದಿಲ್ಲ ಎನ್ನುತ್ತಾನೆ’ ಎಂದು ತಿಳಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು