Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:6 - ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಆ ವ್ಯಕ್ತಿ, “ಹಾಗಾದರೆ ಹೊಲವನ್ನು ಕೊಂಡುಕೊಳ್ಳುವ ಹಕ್ಕನ್ನು ನಾನು ಬಿಟ್ಟುಕೊಡುತ್ತೇನೆ. ಇಲ್ಲದಿದ್ದರೆ ನನ್ನ ಕುಟುಂಬಕ್ಕೆ ಸೇರಿರುವ ಆಸ್ತಿಗೆ ನಷ್ಟವಾಗುತ್ತದೆ. ಆದ್ದರಿಂದ ಆ ಹಕ್ಕನ್ನು ನೀನೇ ವಹಿಸಿಕೋ, ನನ್ನಿಂದಾಗದು,” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಸಮೀಪಬಂಧುವು - ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕೆ ಆ ಸಮೀಪಬಂಧುವು, “ನಾನು ಆ ಹೊಲವನ್ನು ಕೊಂಡುಕೊಳ್ಳಲಾರೆ. ಆ ಹೊಲ ನನಗೆ ಸೇರಬೇಕಾದರೂ ನಾನು ಅದನ್ನು ಕೊಂಡುಕೊಳ್ಳಲಾರೆ. ಒಂದುವೇಳೆ ನಾನು ಅದನ್ನು ಕೊಂಡುಕೊಂಡರೆ ನನ್ನ ಸ್ವಂತ ಹೊಲವನ್ನೇ ಕಳೆದುಕೊಳ್ಳಬೇಕಾಗುವುದು. ಆದ್ದರಿಂದ ನೀನೇ ಆ ಹೊಲವನ್ನು ಕೊಂಡುಕೊಳ್ಳಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಆ ಬಂಧುವು, “ನಾನು ನನ್ನ ಬಾಧ್ಯತೆಯನ್ನು ನಷ್ಟಪಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು. ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; ಏಕೆಂದರೆ ನಾನು ಬಿಡಿಸಿಕೊಳ್ಳಲಾರೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:6
8 ತಿಳಿವುಗಳ ಹೋಲಿಕೆ  

ಈ ರಾತ್ರಿ ಇಲ್ಲೇ ಇರು. ಅವನು ನಿನ್ನನ್ನು ಸಲಹುವ ಜವಾಬ್ದಾರಿ ವಹಿಸಿಕೊಳ್ಳುವನೋ ಇಲ್ಲವೋ ಎಂಬುದನ್ನು ನಾಳೆ ವಿಚಾರಿಸಿಕೊಳ್ಳೋಣ. ಅವನು ಅದನ್ನು ವಹಿಸಿಕೊಳ್ಳುವುದಾದರೆ ಒಳ್ಳೆಯದು. ಇಲ್ಲವಾದರೆ ನಾನೇ ಆ ಕರ್ತವ್ಯವನ್ನು ವಹಿಸಿಕೊಳ್ಳುತ್ತೇನೆ ಎಂದು ಜೀವಸ್ವರೂಪರಾದ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಇನ್ನು ನಿಶ್ಚಿಂತಳಾಗಿ ಮಲಗು,” ಎಂದನು.


ನಿಮ್ಮ ಸ್ವಜನರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರು ಮಾರಿಕೊಂಡರೆ ಅವನ ಸಮೀಪ ನೆಂಟನು ಇದನ್ನು ಬಿಡಿಸಿಕೊಳ್ಳಬೇಕು.


ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ, ‘ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವುದಿಲ್ಲ ಎನ್ನುತ್ತಾನೆ’ ಎಂದು ತಿಳಿಸಬೇಕು.


ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನ ಧರ್ಮಕ್ಕನುಸಾರ ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು,” ಎಂದನು.


ಆಗ ಆ ಊರಿನ ಹಿರಿಯರು ಅವನನ್ನು ಕರೆಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, ‘ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ಹೇಳುವ ಪಕ್ಷಕ್ಕೆ


ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, ‘ಅಣ್ಣನಿಗೆ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ,’ ಎಂದು ಹೇಳಬೇಕು.


ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು