ರೋಮಾಪುರದವರಿಗೆ 1:11 - ಕನ್ನಡ ಸತ್ಯವೇದವು C.L. Bible (BSI)11 ನಾನು ನಿಮ್ಮನ್ನು ಕಂಡು, ನಿಮ್ಮೊಡನೆ ಅಧ್ಯಾತ್ಮಿಕ ವರಗಳನ್ನು ಹಂಚಿಕೊಂಡು, ನಿಮ್ಮನ್ನು ದೃಢಪಡಿಸಲು ಅತ್ಯಾಸಕ್ತಿಯಿಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911-12 ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11-12 ನನ್ನ ಮುಖಾಂತರವಾಗಿ ನಿಮಗೆ ಪಾರಮಾರ್ಥಿಕ ವರವೇನಾದರೂ ದೊರಕಿ ನೀವು ದೃಢವಾಗುವದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ನೀವು ನನ್ನ ನಂಬಿಕೆಯಿಂದ ಸಹಾಯಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಆತ್ಮಿಕ್ ರಿತಿಚೊ ಆಶಿರ್ವಾದ್ ತುಮ್ಚ್ಯಾಕ್ನಾ ವಾಟುನ್ ಘೆವ್ನ್ ತುಮ್ಕಾ ಘಟ್ ಕರುಸಾಟ್ನಿ ಮನುನ್ ತುಮ್ಕಾ ಭೆಟುಚೆಚ್ ಮನ್ತಲಿ ಮಾಕಾ ಲೈ ಆಶಾ ಹಾಯ್. ಅಧ್ಯಾಯವನ್ನು ನೋಡಿ |
ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.