Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:13 - ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾಜ್ಯಾ ದೊಸ್ತಾನೊ ಮಿಯಾ ತುಮ್ಕಾ ಭೆಟುಚೆ ಮನುನ್ ಕವ್ಡೆಂದಾ ಮನ್ ಕರಲ್ಲೊ ಮನುನ್ ತುಮ್ಕಾ ಯಾದ್ ರ್‍ಹಾಂವ್ದಿತ್, ಖರೆ ಕಾಯ್ಕಿ ಮಾಕಾ ಯೆವ್ನ್ ತುಮ್ಕಾ ಭೆಟುಕ್ ಸೊಡಿನಸಿ. ಕಶೆ ದುಸ್ರ್ಯಾಕ್ಡೆ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿ ಖರ್‍ಯಾ ದೆವಾಕ್ ವಳ್ಕಿ ಸರ್ಕೆ ಮಿಯಾ ಕರ್‍ಲಾ, ತಸೆಚ್ ತುಮ್ಚ್ಯಾತ್ಲ್ಯಾ ಲೊಕಾಕ್ನಿ ಮಾಕಾ ಜಿಕುನ್ ಘೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:13
38 ತಿಳಿವುಗಳ ಹೋಲಿಕೆ  

ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.


ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.


ಸಹೋದರರೇ, ಏಷ್ಯಾ ಪ್ರಾಂತ್ಯದಲ್ಲಿ ನಮಗೊದಗಿದ ಹಿಂಸೆಬಾಧೆಗಳು ನಿಮಗೆ ತಿಳಿದಿವೆಯಷ್ಟೆ. ಅಲ್ಲಿ ಸಹಿಸಲಸಾಧ್ಯವಾದಷ್ಟು ಸಂಕಟವನ್ನು ಅನುಭವಿಸಬೇಕಾಯಿತು. ನಾವು ಬದುಕುವ ಆಶೆಯನ್ನೇ ಬಿಡಬೇಕಾಯಿತು.


ಸಹೋದರರೇ, ಪವಿತ್ರಾತ್ಮ ಅವರ ವರದಾನಗಳ ಬಗ್ಗೆ ನೀವು ಸರಿಯಾದ ಅರಿವುಳ್ಳವರಾಗಿರಬೇಕು.


ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.


ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ಇತರರಿಗೆ ನಾನು ಪ್ರೇಷಿತನಲ್ಲದಿದ್ದರೂ ನಿಮಗಂತೂ ನಾನು ಪ್ರೇಷಿತನೇ. ನಾನು ಪ್ರೇಷಿತನು ಎಂಬುದಕ್ಕೆ ಪ್ರಭುವಿಗೆ ಸೇರಿದವರಾದ ನೀವೇ ಜೀವಂತ ಸಾಕ್ಷಿಗಳು.


ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.


ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಅಲ್ಲಿ ಕೆಲವು ಕ್ರೈಸ್ತಭಕ್ತಾದಿಗಳನ್ನು ಕಂಡೆವು. ತಮ್ಮೊಡನೆ ಒಂದು ವಾರ ತಂಗಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ತರುವಾಯ ನಾವು ರೋಮಿಗೆ ಬಂದೆವು.


ಅಂದರೆ, ನನ್ನ ವಿಶ್ವಾಸದಿಂದ ನೀವೂ ನಿಮ್ಮ ವಿಶ್ವಾಸದಿಂದ ನಾನೂ - ಪರಸ್ಪರ ಪ್ರಯೋಜನವನ್ನು ಪಡೆಯಬೇಕೆಂಬುದೇ ನನ್ನ ಆಶಯ.


ಸಹೋದರರೇ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರದ ನೇಮನಿಯಮಗಳಿಗೆ ಒಳಪಟ್ಟಿರುತ್ತಾನೆ. ಧರ್ಮಶಾಸ್ತ್ರವನ್ನು ಅರಿತಿರುವ ನೀವು ಇದನ್ನು ಗ್ರಹಿಸಿಕೊಳ್ಳಬಲ್ಲಿರಿ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.


ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೊಡನೆ ಇರಲಿ! ಆಮೆನ್.


ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು