Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:14 - ಕನ್ನಡ ಸತ್ಯವೇದವು C.L. Bible (BSI)

14 ಜನರು ನಾಗರೀಕರೇ ಆಗಿರಲಿ, ಅನಾಗರಿಕರೇ ಆಗಿರಲಿ, ವಿದ್ಯಾವಂತರೇ ಆಗಿರಲಿ, ಅವಿದ್ಯಾವಂತರೇ ಆಗಿರಲಿ, ಅವರೆಲ್ಲರಿಗೂ ನಾನು ಕರ್ತವ್ಯಬದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಗ್ರೀಕರಿಗೂ ಇತರ ಜನಗಳಿಗೂ ಜ್ಞಾನಿಗಳಿಗೂ ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲೆ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಎಲ್ಲಾ ಜನರ ಅಂದರೆ ಗ್ರೀಕರ ಮತ್ತು ಗ್ರೀಕರಲ್ಲದವರ, ಹಾಗೂ ಜ್ಞಾನಿಗಳ ಮತ್ತು ಮೂಢರ ಸೇವೆ ಮಾಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಗ್ರೀಕರಿಗೂ ಗ್ರೀಕರಲ್ಲದವರಿಗೂ ಜ್ಞಾನಿಗಳಿಗೂ ಮೂಢರಿಗೂ ನಾನು ಸಾಲಗಾರನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶ್ಯಾಕ್ ಮಟ್ಲ್ಯಾರ್ ಸಗ್ಳ್ಯಾ ರಿತಿನ್ ಅಭಿವೃದ್ದಿ ಹೊಲ್ಲ್ಯಾ ಲೊಕಾತ್ನಿಬಿ, ಶಿಕಾಪ್ ಅಸಲ್ಲ್ಯಾ ಲೊಕಾತ್ನಿಬಿ ನಸಲ್ಲ್ಯಾ ಲೊಕಾತ್ನಿಬಿ ಅನಿ ದುಸ್ರ್ಯಾ ಸಗ್ಳ್ಯಾ ಲೊಕಾತ್ನಿಬಿ ಕಾಮ್ ಕರುಚೆ ಮನ್ತಲೊ ಭಾರ್ ಮಾಜ್ಯಾ ವರ್‍ತಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:14
31 ತಿಳಿವುಗಳ ಹೋಲಿಕೆ  

ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ನೀವಾದರೋ ಮಹಾ ಬುದ್ಧಿವಂತರು! ಬುದ್ಧಿಹೀನರನ್ನು ಬಹಳವಾಗಿ ಸಹಿಸಿಕೊಳ್ಳುತ್ತೀರಿ.


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.


ಆದ್ದರಿಂದ ಸಹೋದರರೇ, ನಾವು ಶರೀರ ಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ.


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಕೆಲವರು ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ. ಅವರಂತೆ ಕೊಚ್ಚಿಕೊಳ್ಳುವುದಕ್ಕೂ ಅವರೊಡನೆ ಹೋಲಿಸಿಕೊಳ್ಳುವುದಕ್ಕೂ ನಾವು ಯತ್ನಿಸುವುದಿಲ್ಲ. ಅವರಿಗೆ ತಾವು ಹಾಕಿಕೊಂಡದ್ದೇ ಅಳತೆಗೋಲು. ತಮಗೆ ತಾವೇ ತಾಳೆಹಾಕಿಕೊಳ್ಳುವಂಥ ಅವಿವೇಕಿಗಳು.


ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


ಭಾಷೆಯ ಅರ್ಥವು ನನಗಾಗದಿದ್ದರೆ ಮಾತನಾಡುವವನಿಗೆ ನಾನು ಪರಕೀಯನಂತಾಗುತ್ತೇನೆ; ನನಗೆ ಅವನು ಪರಕೀಯನಂತಾಗುತ್ತಾನೆ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.


ಅಲ್ಲಿಯ ನಿವಾಸಿಗಳು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆ ಹೊಯ್ದು ಚಳಿಯಾಗುತ್ತಿದ್ದುದರಿಂದ ಅವರು ಬೆಂಕಿಮಾಡಿ ನಮ್ಮೆಲ್ಲರನ್ನು ಬರಮಾಡಿಕೊಂಡರು.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು