Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:16 - ಕನ್ನಡ ಸತ್ಯವೇದವು C.L. Bible (BSI)

16 ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಾಕಾ ಪುರಾ ಆತ್ಮಿಕ್ ಬರೊಸೊ ಹಾಯ್; ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಅದ್ದಿ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಸಗ್ಳ್ಯಾಕ್ನಿಬಿ ಹುರ್ವುತಲೊ ದೆವಾಚೊ ಬಳ್ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:16
38 ತಿಳಿವುಗಳ ಹೋಲಿಕೆ  

ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ಅದಕ್ಕೆ ಪ್ರತಿಯಾಗಿ, ಒಬ್ಬನು ಕ್ರೈಸ್ತವಿಶ್ವಾಸಿ ಎಂಬ ಕಾರಣದಿಂದ ಹಿಂಸೆಯನ್ನು ಅನುಭವಿಸಿದರೆ ಅಂಥವನು ನಾಚಿಕೆಪಡಬೇಕಾಗಿಲ್ಲ; ಕ್ರೈಸ್ತವಿಶ್ವಾಸಿ ಎಂಬ ಆ ಹೆಸರನ್ನು ಪಡೆದುದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಲಿ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.


ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.


ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.


ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.


ಯೆಹೂದ್ಯರನ್ನು ಮೊದಲ್ಗೊಂಡು, ಇತರರಿಗೂ ಪಾಪಕೃತ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಕಷ್ಟಸಂಕಟಗಳು ಕಾದಿರುತ್ತವೆ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಮಾತಾಡುವೆನು ನಿನ್ನ ಆಜ್ಞೆಗಳ ವಿಷಯವಾಗಿ I ಅರಸುಗಳ ಮುಂದೆಯು ನಿಸ್ಸಂಕೋಚವಾಗಿ II


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.


ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.


ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.


ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ಹಾಗೆ ಬರುವಾಗ ನಿಮಗೆ ಕ್ರಿಸ್ತಯೇಸುವಿನ ಅಮೂಲ್ಯ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂಬ ಭರವಸೆ ನನಗಿದೆ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.


ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು