Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:19 - ಕನ್ನಡ ಸತ್ಯವೇದವು C.L. Bible (BSI)

19 ದೇವರ ವಿಷಯವಾಗಿ ಮಾನವರು ಏನನ್ನು ಅರಿತುಕೊಳ್ಳಲು ಸಾಧ್ಯವೋ ಅದು ಅವರಿಗೆ ಚೆನ್ನಾಗಿ ತಿಳಿದಿದೆ. ದೇವರೇ ಅದನ್ನು ಅವರಿಗೆ ಸ್ಪಷ್ಟಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಕಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದದೆ; ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ತನ್ನ ಕೋಪವನ್ನು ತೋರಿಸುತ್ತಾನೆ, ಏಕೆಂದರೆ ದೇವರ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ಅವರಿಗೆ ಸ್ಪಷ್ಟಪಡಿಸಲಾಗಿದೆ. ಹೌದು, ತನ್ನ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ದೇವರು ಜನರಿಗೆ ಸ್ಪಷ್ಟವಾಗಿ ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರ ವಿಷಯವಾಗಿ ತಿಳಿಯಬಹುದಾದದ್ದನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. ಏಕೆಂದರೆ ಅದನ್ನು ಅವರಿಗೆ ದೇವರೇ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ವಿಶಯಾತ್ ಜೆ ಕಾಯ್ ತೆಂಕಾ ಕಳ್ವುತಲೆ ಹೊತ್ತೆ ತೆ ತೆಂಕಾ ಸಮಾ ದಾಕ್ವಲ್ಲೆ ಹಾಯ್, ಖುದ್ದ್ ದೆವಾನುಚ್ ತೆಂಕಾ ತೆ ಕಳ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:19
9 ತಿಳಿವುಗಳ ಹೋಲಿಕೆ  

ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ನಿಮಗೆ ತಿಳಿದಿಲ್ಲವೋ, ನೀವು ಕೇಳಿಲ್ಲವೋ ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಪೃಥ್ವಿಸ್ಥಾಪನೆ ಹೇಗಾಯಿತೆಂದು ನೀವು ಗ್ರಹಿಸಿಲ್ಲವೋ?


ಯೆಹೂದ್ಯರಲ್ಲದವರಿಗೆ, ಮೋಶೆಯ ಧರ್ಮಶಾಸ್ತ್ರ ಇರುವುದಿಲ್ಲ. ಅವರು ಅದರ ವಿಧಿನಿಯಮಗಳನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇ ಆದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು