Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:2 - ಕನ್ನಡ ಸತ್ಯವೇದವು C.L. Bible (BSI)

2 ದೇವರು ತಮ್ಮ ಶುಭಸಂದೇಶವನ್ನು ನೀಡುವುದಾಗಿ ಪ್ರವಾದಿಗಳ ಮುಖಾಂತರ ಮುಂಚಿತವಾಗಿಯೇ ಪವಿತ್ರಗ್ರಂಥದಲ್ಲಿ ವಾಗ್ದಾನಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸುವಾರ್ತೆಯನ್ನು ಸಾರಿ ಹೇಳಿಸುತ್ತೇನೆಂದು ದೇವರು ಮುಂಚಿತವಾಗಿ ಪವಿತ್ರಶಾಸ್ತ್ರಗಳಲ್ಲಿ ತನ್ನ ಪ್ರವಾದಿಗಳ ಮೂಲಕ ಮಾತುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ತನ್ನ ಜನರಿಗೆ ಈ ಸುವಾರ್ತೆಯನ್ನು ಕೊಡುವುದಾಗಿ ಬಹುಕಾಲದ ಹಿಂದೆಯೇ ತನ್ನ ಪ್ರವಾದಿಗಳ ಮೂಲಕ ಪವಿತ್ರ ಗ್ರಂಥದಲ್ಲಿ ವಾಗ್ದಾನ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ಮುಂಚಿತವಾಗಿ ಪವಿತ್ರ ವೇದಗಳಲ್ಲಿ ತಮ್ಮ ಪ್ರವಾದಿಗಳ ಮೂಲಕ ವಾಗ್ದಾನಮಾಡಿದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪವಿತ್ರ್ ಪುಸ್ತಕಾತ್ ದೆವಾನ್ ಅಪ್ನಾಚ್ಯಾ ಪ್ರವಾದ್ಯಾಂಚ್ಯಾ ವೈನಾ ಲೈ ದಿಸಾಂಚ್ಯಾ ಅದ್ದಿಚ್ ಗೊಸ್ಟ್ ದಿವ್ನ್ ಸಾಂಗಲ್ಲಿ ಬರಿ ಖಬರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:2
10 ತಿಳಿವುಗಳ ಹೋಲಿಕೆ  

ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ I ಅರುಹಿಸಿರುವನು ಇಂತೆಂದು ನಮಗೆ: II


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ.


ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ನಮ್ಮ ಪೂರ್ವಜರಿಗೆ ದೇವರು ಮಾಡಿದ ವಾಗ್ದಾನದಲ್ಲಿ ನಂಬಿಕೆಯಿಟ್ಟುದಕ್ಕಾಗಿಯೇ ನಾನು ಇಂದು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ.


“ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.


ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು