Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:20 - ಕನ್ನಡ ಸತ್ಯವೇದವು C.L. Bible (BSI)

20 ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೇಗಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯಶಕ್ತಿಯೂ ದೇವತ್ವವೂ ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತವೆ; ಹೀಗಿರುವದರಿಂದ ಅವರು ಉತ್ತರವಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಡೊಳ್ಯಾಕ್ನಿ ದಿಸಿ ನಸಲ್ಲಿ ತೆಚಿ ಗುನಾ ಮಟ್ಲ್ಯಾರ್, ತೆಚೊ ಕನ್ನಾಚ್ ಸರಿನಸಲ್ಲೊ ಬಳ್ ಅನಿ ದೈವಿಕ್ ಗುನ್, ಹ್ಯೊ ಜಗ್ ರಚಲ್ಲ್ಯಾಕ್ನಾ ಧರುನ್ ತೆನಿ ರಚಲ್ಲ್ಯಾ ಸಗ್ಳ್ಯಾಚ್ಯಾ ವೈನಾ ದಿಸುನ್ ಯೆತ್ಯಾತ್, ತಸೆಮನುನ್ ತ್ಯಾ ಲೊಕಾನಿಕ್ಡೆ ನೆವಾನ್ ಸಾಂಗುಕ್ ಕಾಯ್ಬಿ ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:20
37 ತಿಳಿವುಗಳ ಹೋಲಿಕೆ  

ದೇವರ ವಿಷಯವಾಗಿ ಮಾನವರು ಏನನ್ನು ಅರಿತುಕೊಳ್ಳಲು ಸಾಧ್ಯವೋ ಅದು ಅವರಿಗೆ ಚೆನ್ನಾಗಿ ತಿಳಿದಿದೆ. ದೇವರೇ ಅದನ್ನು ಅವರಿಗೆ ಸ್ಪಷ್ಟಪಡಿಸಿದ್ದಾರೆ.


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ಧರ್ಮಶಾಸ್ತ್ರದ ವಿಧಿನಿಯಮಗಳು ಅವರ ಹೃದಯಗಳಲ್ಲಿ ಲಿಖಿತವಾಗಿವೆಯೆಂದು ಅವರ ನಡತೆಯಿಂದಲೇ ವೇದ್ಯವಾಗುತ್ತದೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ನನ್ನ ಅಂತರಂಗವನು ಉಂಟುಮಾಡಿದಾತ ನೀನು I ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II


ಇರುವುದು ತಲತಲಾಂತರಕು ನಿನ್ನ ಸತ್ಯತೆ I ನೀ ಸ್ಥಾಪಿಸಿದ ಭೂಮಂಡಲಕ್ಕಿದೆ ಸ್ಥಿರತೆ II


ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I ಅದೆಂದಿಗೂ ಕದಲದಂತೆ ಮಾಡಿರುವೆ II


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಸ್ವಾಮಿದೇವನ ಮಹಿಮೆಯಿರಲಿ ಶಾಶ್ವತವಾಗಿ I ಆತ ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”


ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು.


ಆತ ಭೂಮಿಯನ್ನು ನಿರ್ಮಿಸಿದ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ ವಿವೇಕದಿಂದ.


ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ.


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು