Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:24 - ಕನ್ನಡ ಸತ್ಯವೇದವು C.L. Bible (BSI)

24 ಆದುದರಿಂದ, ಮಾನವರು ಮನಸ್ಸಿನ ಆಶಾಪಾಶಗಳಿಗೆ ಬಲಿಯಾಗಿ ತಮ್ಮ ದೇಹಗಳಿಂದ ತಮ್ಮತಮ್ಮಲ್ಲೇ ಅಶ್ಲೀಲಕೃತ್ಯಗಳೆಸಗಲೆಂದು ದೇವರು ಅವರನ್ನು ಅಶುದ್ಧ ನಡತೆಗೆ ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ನಡತೆಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪಾಪಗಳಿಂದ ತುಂಬಿಹೋಗಿದ್ದ ಅವರು ದುಷ್ಕೃತ್ಯಗಳನ್ನೇ ಮಾಡಬಯಸಿದರು. ಆದ್ದರಿಂದ ಪಾಪಮಾರ್ಗದಲ್ಲೇ ಹೋಗಲೆಂದು ದೇವರು ಅವರನ್ನು ಬಿಟ್ಟುಬಿಟ್ಟನು. ಅದರಿಂದಾಗಿ ಅವರು ತಮ್ಮತಮ್ಮಲ್ಲೇ ತಮ್ಮ ದೇಹಗಳಿಂದ ಲೈಂಗಿಕ ಪಾಪಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆಮನುನ್ ದೆವಾನ್ ತೆಂಕಾ ತೆಂಚ್ಯಾ-ತೆಂಚ್ಯಾ ಬುರ್ಶ್ಯಾ ಚಾಲಿ ಸಾರ್ಕೆ ಚಲುಕ್ ಒಪ್ಸುನ್ ದಿಲ್ಯಾನಾಯ್, ತೆನಿ ಎಕಾಮೆಕಾಂಚ್ಯಾ ವಾಂಗ್ಡಾ ಅಬ್ರುಗೆಡಿ ಕಾಮಾ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:24
16 ತಿಳಿವುಗಳ ಹೋಲಿಕೆ  

ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.


ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಹೇಸಿಗೆಯಾದುದು.


ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಪತ್ನಿಯನ್ನು ಘನತೆ ಗೌರವದಿಂದಲೂ ಶುದ್ಧಮನಸ್ಸಿನಿಂದಲೂ ನಡೆಸಿಕೊಳ್ಳಬೇಕು.


ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು