Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:25 - ಕನ್ನಡ ಸತ್ಯವೇದವು C.L. Bible (BSI)

25 ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಸತ್ಯದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿಕರ್ತನನ್ನು ಪೂಜಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವಿಸುವವರಾದರು. ಸೃಷ್ಟಿಕರ್ತನೊಬ್ಬನೇ ನಿರಂತರ ಸ್ತುತಿಹೊಂದತಕ್ಕವನು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ದೆವಾಚ್ಯಾ ವಿಶಯಾತ್ ಹೊತ್ತೆ ಖರೆ, ಎಕ್ ಝುಟೆ ಕರುನ್ ಬದಲ್ಲ್ಯಾನಾತ್; ದೆವಾನ್ ರಚಲ್ಲ್ಯಾ ರಚ್ನೆಂಚಿ ತೆನಿ ಸೆವಾ ಅನಿ ಆರಾದನ್ ಕರ್‍ತ್ಯಾತ್, ಸಗ್ಳೆ ರಚಲ್ಲ್ಯಾ ದೆವಾಕುಚ್ ತೆನಿ ಸೊಡುನ್ ಸೊಡ್ಲ್ಯಾನಾತ್, ತ್ಯಾ ದೆವಾಕ್ ಸ್ತುತಿ ಹೊವ್ಕ್ ಪಾಜೆ ಸದಾ ಸರ್ವತಾಕ್! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:25
22 ತಿಳಿವುಗಳ ಹೋಲಿಕೆ  

ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಅಮರದೇವರನ್ನು ಆರಾಧಿಸುವುದನ್ನು ಬಿಟ್ಟು ಅಳಿದುಹೋಗುವಂಥ ನರಮಾನವರ, ಪ್ರಾಣಿಪಕ್ಷಿಗಳ, ಸರ್ಪಾದಿಗಳ ವಿಗ್ರಹಗಳನ್ನು ಮಾಡಿ ಆರಾಧಿಸತೊಡಗಿದರು.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ.


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.


“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಯೇಸು, “ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ,” ಎಂದು ಹೇಳಲು ಅವರು ಹಾಗೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು