Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:31 - ಕನ್ನಡ ಸತ್ಯವೇದವು C.L. Bible (BSI)

31 ಮಾತ್ರವಲ್ಲ, ಅವರು ಅವಿವೇಕಿಗಳು, ಅಪ್ರಾಮಾಣಿಕರು, ನಿಷ್ಕರುಣಿಗಳು ಮತ್ತು ನಿರ್ದಯಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ ಮಾತಿಗೆ ತಪ್ಪುವವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆಂಕಾ ಅಕ್ಕಲ್ ನಾ, ತೆನಿ ದಿಲ್ಲಿ ಗೊಸ್ಟ್ ಫುರಾ ಕರಿನ್ಯಾತ್, ಅನಿ ತೆನಿ ದುಸ್ರ್ಯಾಂಚ್ಯಾ ವರ್‍ತಿ ದಯಾ ಹೊಂವ್ದಿ ಕರಾನ್ ಹೊಂವ್ದಿತ್ ದಾಕ್ವಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:31
10 ತಿಳಿವುಗಳ ಹೋಲಿಕೆ  

ಅವರು ಮಮತೆ ಇಲ್ಲದವರೂ ಸಮಾಧಾನ ಸಹಿಸದವರೂ ಚಾಡಿಕೋರರೂ ಸ್ವೇಚ್ಛಾವರ್ತಿಗಳೂ ಕ್ರೂರಿಗಳೂ ಒಳಿತನ್ನು ದ್ವೇಷಿಸುವವರೂ ಆಗುವರು.


ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.


ದೇವರೊಡನೆ ಸತ್ಸಂಬಂಧಿತರಾರೂ ಇಲ್ಲ ಸನ್ಮತಿಗಳು ಒರ್ವರೂ ಇಲ್ಲ ಆತನನ್ನು ಅರಸುವವರಂತೂ ಇಲ್ಲವೇ ಇಲ್ಲ.


ಯೇಸು ಇಂತೆಂದರು: “ನೀವು ಕೂಡ ಮಂದಮತಿಗಳೇನು? ಇದರ ಅರ್ಥ ನಿಮಗೂ ಆಗದೇನು?


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ರಾಜಮಾರ್ಗಗಳು ಬರಿದಾಗಿವೆ. ದಾರಿಗರೇ ಇಲ್ಲ.. ಶತ್ರುಗಳು ಒಪ್ಪಂದವನ್ನು ಮುರಿದಿದ್ದಾರೆ. ಸಾಕ್ಷಿಗಳನ್ನು ತಿರಸ್ಕರಿಸಿದ್ದಾರೆ. ಮಾನವರನ್ನು ಗಣನೆಗೆ ತಂದುಕೊಳ್ಳದವರಾಗಿದ್ದಾರೆ.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು