Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:5 - ಕನ್ನಡ ಸತ್ಯವೇದವು C.L. Bible (BSI)

5 ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಶೆ ವಿಶ್ವಾಸಾತ್ ಅನಿ ದೆವಾಕ್ ಖಾಲ್ತಿ ಹೊವ್ನ್ ಚಲ್ತಲ್ಯಾತ್ ಸಗ್ಳ್ಯಾ ದೆಶಾನಿತ್ಲ್ಯಾ ಲೊಕಾಕ್ನಿ ಚಾಲ್ವುನ್ ನ್ಹೆವ್‍ಸಾಟ್ನಿ, ತೆಚ್ಯಾ ವೈನಾ ಕ್ರಿಸ್ತಾ ಸಾಟ್ನಿ ಎಕ್ ಅಪೊಸ್ತಲ್ ಹೊತಲೊ ಅವ್ಕಾಸ್ ದೆವಾನ್ ಮಾಕಾ ಕರುನ್ ದಿಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:5
24 ತಿಳಿವುಗಳ ಹೋಲಿಕೆ  

ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಇತರರಿಗೆ ನಾನು ಪ್ರೇಷಿತನಲ್ಲದಿದ್ದರೂ ನಿಮಗಂತೂ ನಾನು ಪ್ರೇಷಿತನೇ. ನಾನು ಪ್ರೇಷಿತನು ಎಂಬುದಕ್ಕೆ ಪ್ರಭುವಿಗೆ ಸೇರಿದವರಾದ ನೀವೇ ಜೀವಂತ ಸಾಕ್ಷಿಗಳು.


ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು