Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:1 - ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಇಸ್ರಾಯೇಲ್ಯರು ರಕ್ಷಣೆಹೊಂದಬೇಕೆಂಬದೇ ನನ್ನ ಮನೋಭಿಲಾಷೆಯೂ ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಇಸ್ರೇಲರೆಲ್ಲರೂ ರಕ್ಷಣೆ ಹೊಂದಬೇಕೆಂಬುದೇ ನನ್ನ ಮಹಾಭಿಲಾಷೆ. ನಾನು ದೇವರಲ್ಲಿ ಅದಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮಾಜಿ ಸ್ವತಾಚಿ ಲೊಕಾ ಬಚಾವ್ ಹೊವ್ಚೆ ಮನುನ್ ಮಿಯಾ ಕವ್ಡಿಕಿ ಆಶಾ ಕರ್‍ತಾ! ಮಿಯಾ ಕವ್ಡೆಕಿ ತೆಂಚ್ಯಾ ಸಾಟ್ನಿ ದೆವಾಕ್ಡೆ ಮಾಗ್ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:1
14 ತಿಳಿವುಗಳ ಹೋಲಿಕೆ  

ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.


ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.


ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”


ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು