Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:12 - ಕನ್ನಡ ಸತ್ಯವೇದವು C.L. Bible (BSI)

12 ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ವಿಷಯದಲ್ಲಿ ಯೆಹೂದ್ಯನಿಗೂ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತ; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಸಗ್ಳ್ಯಾಂಚ್ಯಾ ವಿಶಯಾತ್‍ಬಿ ಸಾಂಗಲ್ಲೆ ಹಾಯ್ ಕಶ್ಯಾಕ್ ಮಟ್ಲ್ಯಾರ್, ಹ್ಯಾತುರ್ ಜುದೆವ್ ಅನಿ ಜುದೆವ್ ನ್ಹಯ್ ಹೊತ್ತೊ ಮನ್ತಲೊ ಭೆದ್ ನಾ, ದೆವ್ ಸಗ್ಳ್ಯಾಕ್ನಿಬಿ ಎಕುಚ್ ನಮುನ್ಯಾಚೊ ಧನಿ ಅನಿ ಜೆ ಕೊನ್ ತೆಕಾ ಬಲ್ವುತ್ಯಾತ್ ತೆಂಕಾ ತೊ ಭರ್ಪುರ್ ಆಶಿರ್ವಾದಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:12
33 ತಿಳಿವುಗಳ ಹೋಲಿಕೆ  

ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,


ಮಗದೊಂದು ಕಡೆ ಯೆಶಾಯನು ಹೀಗೆನ್ನುತ್ತಾನೆ: “ಜೆಸ್ಸೆಯನ ವಂಶಜನು ಬರುವನು ಅನ್ಯಜನಾಂಗಗಳನ್ನು ಆಳುವವನು ಉದಯಿಸುವನು ಆ ಜನಾಂಗಗಳು ಆತನಲ್ಲೇ ಭರವಸೆಯನ್ನಿಡುವುವು.”


ಅಷ್ಟುಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ,” ಎಂದನು.


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು