Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:15 - ಕನ್ನಡ ಸತ್ಯವೇದವು C.L. Bible (BSI)

15 ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಬಾತ್ಮಿ ತರ್ ಸಾಂಗಲ್ಲ್ಯಾಕ್ನಿಚ್ ಬಲ್ವಲ್ಲೆ ನಸ್ತಾನಾ ಬಾತ್ಮಿ ಸಾಂಗುನ್ ತರ್ ಕಶಿ ಹೊತಾ? ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸರ್ಕೆ. ಬರಿ ಖಬರ್ ಘೆವ್ನ್ ಯೆತಲ್ಯಾ ಬಾತ್ಮಿ ಸಾಂಗ್ತಲ್ಯಾಂಚೆ ಯೆನೆ ಕವ್ಡೆ ವಿಚಿತ್ರ್ ರ್‍ಹಾತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:15
28 ತಿಳಿವುಗಳ ಹೋಲಿಕೆ  

ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟುಕೊಳ್ಳಿರಿ.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.


ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.


ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಆದುದರಿಂದಲೇ ರೋಮ್ ನಗರದಲ್ಲಿರುವ ನಿಮಗೂ ಶುಭಸಂದೇಶವನ್ನು ಸಾರಲು ನಾನು ಆತುರದಿಂದ ಎದುರುನೋಡುತ್ತಿದ್ದೇನೆ.


ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು