Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:20 - ಕನ್ನಡ ಸತ್ಯವೇದವು C.L. Bible (BSI)

20 ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಇಸಾಯಿಯಾ ಅನಿ ಉಲ್ಲೆ ಬರೆ ಕರುನ್ ಸಾಂಗ್ತಾ, ಕೊನ್ ಮಾಜಿ ವಾಟ್ ರಾಕುನ್ಗೆತ್ ನತ್ತೆ, ತೆಂಕಾ ಮಿಯಾ ಗಾವ್ಲೊ; ಜೆ ಕೊನ್ ಮಾಜ್ಯಾ ವಿಶಯಾತ್ ಇಚಾರಿನಸಿತ್ ತೆಂಕಾ ಮಿಯಾ ದಿಸ್ಲೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:20
14 ತಿಳಿವುಗಳ ಹೋಲಿಕೆ  

ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ.


ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ಇದಕ್ಕೆ ಕಾರಣವಾದರೂ ಏನು? ಅವರು ಸತ್ಕಾರ್ಯಗಳನ್ನು ಆಧಾರವಾಗಿಟ್ಟುಕೊಂಡರೇ ಹೊರತು ವಿಶ್ವಾಸವನ್ನಲ್ಲ.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು