ರೋಮಾಪುರದವರಿಗೆ 10:3 - ಕನ್ನಡ ಸತ್ಯವೇದವು C.L. Bible (BSI)3 ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ದೆವ್ ಖಲ್ಯಾ ರಿತಿನ್ ಲೊಕಾಕ್ನಿ ಅಪ್ನಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆತಾ ಮನ್ತಲೆ ತೆಂಕಾ ಗೊತ್ತ್ ನತ್ತೆ, ಹೆಚ್ಯಾ ಬದ್ಲಾಕ್, ತೆನಿ ತೆಂಚ್ಯಾ ವಾಟಾಚ್ ಸಮಾ ಕರುಕ್ ಬಗಟ್ಲ್ಯಾನಿ, ಅನಿ ಹೆಕಾ ಲಾಗುನ್ ತೆನಿ ದೆವಾನ್ ಲೊಕಾಕ್ನಿ ಖರ್ಯಾ ವಾಟೆನ್ ಚಲ್ತಲಿ ಮನುನ್ ಥವ್ತಲ್ಯಾ ವಾಟೆಕ್ ತೆಂಕಾಚ್ ಒಪ್ಸುನ್ ದಿವ್ಕ್ ನ್ಯಾಯ್. ಅಧ್ಯಾಯವನ್ನು ನೋಡಿ |