Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:4 - ಕನ್ನಡ ಸತ್ಯವೇದವು C.L. Bible (BSI)

4 ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿರುವ ಕ್ರಿಸ್ತನಿಂದಲೇ ಕರ್ಮಮಾರ್ಗಕ್ಕೆ ಅಂತ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತನ್ನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ನೀತಿನಿರ್ಣಯ ಹೊಂದಬೇಕೆಂದು ಕ್ರಿಸ್ತನು ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾನ್ ಖಾಯ್ದ್ಯಾಕ್ ಎಕ್ ಸರ್ತಲ್ಯಾ ಹಂತಾಕ್ ಹಾನಲ್ಲ್ಯಾನ್, ತೆಚೆಸಾಟ್ನಿ ಜೆ ಕೊನ್ ವಿಶ್ವಾಸ್ ಕರ್‍ತ್ಯಾತ್ ತೆಂಕಾ ಹರಿಎಕ್ಲ್ಯಾಕ್ನಿ ಖರ್ಯಾ ವಾಟೆನ್ ಚಲಲ್ಲೆ ಮನುನ್ ದೆವಾಚ್ಯಾ ವಾಂಗ್ಡಾ ಥವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:4
18 ತಿಳಿವುಗಳ ಹೋಲಿಕೆ  

ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ.


ಇವುಗಳೆಲ್ಲವೂ ಬರಲಿದ್ದುದರ ಛಾಯೆ ಮಾತ್ರ; ಕ್ರಿಸ್ತಯೇಸುವೇ ಅವುಗಳ ಸತ್ಯಸ್ವರೂಪ.


ಸಕಲ ಆಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು