Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:5 - ಕನ್ನಡ ಸತ್ಯವೇದವು C.L. Bible (BSI)

5 ಧರ್ಮಶಾಸ್ತ್ರ ಪಾಲನೆಯಿಂದ ಲಭಿಸುವ ಸತ್ಸಂಬಂಧದ ಬಗ್ಗೆ ಮೋಶೆ ಹೀಗೆ ಬರೆದಿದ್ದಾನೆ: “ಧರ್ಮಶಾಸ್ತ್ರದ ನೇಮನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೇಮನಿಷ್ಠೆಗಳಿಂದಾಗುವ ನೀತಿಯ ವಿಷಯದಲ್ಲಿ - ಅದನ್ನು ಅನುಸರಿಸಿದವನೇ ಅದರಿಂದ ಜೀವಿಸುವನೆಂದು ಮೋಶೆಯು ಬರೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ಎಂದು ಮೋಶೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,” ಎಂಬುದಾಗಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮೊಯ್ಜೆನ್ ಖಾಯ್ದ್ಯಾಕ್ನಿ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ಖರ್ಯಾ ವಾಟೆನ್ ಚಲ್ತಲಿ ದೆವಾಚಿ ಲೊಕಾ ಮನುನ್ ಸಾಂಗ್ತಲ್ಯಾಚ್ಯಾ ವಿಶಯಾತ್ ಅಶೆ ಲಿವ್ಲ್ಯಾನಾಯ್; “ಜೊ ಕೊನ್ ಖಾಯ್ದ್ಯಾನಿತ್ಲೊ ಹುಕುಮ್ ಪಾಳ್ತಾ ತೊ ಝಿತ್ತೊ ರ್‍ಹಾತಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:5
11 ತಿಳಿವುಗಳ ಹೋಲಿಕೆ  

ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.


ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ.


ನಾನಾದರೋ ಸತ್ತೆನು. ಜೀವದಾಯಕವಾಗಬೇಕಿದ್ದ ಆಜ್ಞೆಯೇ ನನಗೆ ಮೃತ್ಯುಕಾರಕವಾಯಿತು.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು