Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:7 - ಕನ್ನಡ ಸತ್ಯವೇದವು C.L. Bible (BSI)

7 “ಕ್ರಿಸ್ತಯೇಸುವನ್ನು ಸಾವಿನಿಂದ ಮೇಲಕ್ಕೆ ಕರೆತರಲು ಪಾತಾಳಕ್ಕೆ ಇಳಿದುಹೋಗುವವರು ಯಾರು?” ಎಂದಾಗಲೀ ನಿನ್ನ ಮನದಲ್ಲಿ ನೀನು ಪ್ರಶ್ನಿಸಿಕೊಳ್ಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವದಕ್ಕೆ ಯಾರು ಪ್ರೇತಲೋಕಕ್ಕೆ ಇಳಿದುಹೋದಾರು? ಎಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “‘ಯಾರು ಪಾತಾಳಕ್ಕೆ ಇಳಿದುಹೋಗಬಲ್ಲರು’ ಎಂದಾಗಲಿ ಹೇಳಬೇಡಿ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಥವಾ, ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು ಯಾರು ಪಾತಾಳಕ್ಕೆ ಇಳಿದು ಹೋಗುವರು?’ ಎಂದು ಮನಸ್ಸಿನಲ್ಲಿ ಹೇಳಿಕೊಳ್ಳಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ನಾಹೊಲ್ಯಾರ್ ತುಮಿ ಕ್ರಿಸ್ತಾಕ್ ಝಿತ್ತೊ ಕರುಕ್ ಉಟ್ವುಕ್ ಪಾತಾಳ್ ಲೊಕಾತ್ ಕೊನ್ ಜಾತಾ? ಮನುನ್ ಇಚಾರ್‍ತಲೆ ನಕ್ಕೊ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:7
6 ತಿಳಿವುಗಳ ಹೋಲಿಕೆ  

ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ಆ ಪಿಶಾಚಿಗಳು, “ಪಾತಾಳಕ್ಕೆ ಹೋಗಿಬೀಳಿರೆಂದು ನಮಗೆ ಆಜ್ಞೆಮಾಡಬೇಡಿ,” ಎಂದು ಯೇಸುವನ್ನು ಬೇಡಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು