Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:8 - ಕನ್ನಡ ಸತ್ಯವೇದವು C.L. Bible (BSI)

8 ಧರ್ಮಗ್ರಂಥವು ಹೇಳುವುದಿಷ್ಟೆ; ದೇವರ ವಾಕ್ಯ ನಿನ್ನ ಸಮೀಪದಲ್ಲೇ ಇದೆ. ಅದು ನಿನ್ನ ಬಾಯಲ್ಲೂ ಹೃದಯದಲ್ಲೂ ಇದೆ. ಅದೇ ನಾವು ನಿಮಗೆ ಬೋಧಿಸುವ ವಿಶ್ವಾಸದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬೇಡ. ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಅನ್ನುತ್ತದೆ. ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆ ಕಾಯ್ ಸಾಂಗ್ತಾ ಕಾಯ್ ಮಟ್ಲ್ಯಾರ್, ದೆವಾಚಿ ಬಾತ್ಮಿ ತುಜೆಕ್ಡೆ ಹಾಯ್, ತುಜ್ಯಾ ಹೊಟ್ಟಾ ವೈನಿ ಅನಿ ತುಜ್ಯಾ ಮನಾತ್ ಹಾಯ್” ತಿ ಖಲಿ ಕಾಯ್ ಮಟ್ಲ್ಯಾರ್, ತಿಚ್ ಅಮಿ ಸಾಂಗ್ತಲಿ ವಿಶ್ವಾಸಾಚಿ ಬಾತ್ಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:8
14 ತಿಳಿವುಗಳ ಹೋಲಿಕೆ  

ಅನುಸರಿಸುವುದಕ್ಕೆ ಸಾಧ್ಯವಾಗುವಂತೆ ಈ ವಾಕ್ಯ ನಿಮಗೆ ಸಮೀಪದಲ್ಲಿ ಇದೆ; ಇದು ನಿಮ್ಮ ಬಾಯಲ್ಲೇ ಇದೆ; ಹೃದಯದಲ್ಲೇ ಇದೆ.


ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.


ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.


ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


“ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು