Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:9 - ಕನ್ನಡ ಸತ್ಯವೇದವು C.L. Bible (BSI)

9 “ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದೇನಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತನಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮಿ ಜೆಜುಚ್ ಧನಿ ಅನಿ ದೆವಾನ್ ತೆಕಾ ಝಿತ್ತೊ ಕರುನ್ ಉಟ್ವುಲ್ಯಾನಾಯ್ ಮನುನ್ ಸಮ್ಜುನ್ ಘೆಟಲ್ಯಾಶಿ ತರ್ ಬಚಾವ್ ಹೊತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:9
22 ತಿಳಿವುಗಳ ಹೋಲಿಕೆ  

“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


“ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಪವಿತ್ರಗ್ರಂಥದಲ್ಲಿ : ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ.


ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.


ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ.


ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು