Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:1 - ಕನ್ನಡ ಸತ್ಯವೇದವು C.L. Bible (BSI)

1 ಹಾಗಾದರೆ ದೇವರು ತಮ್ಮ ಜನರಾದ ಇಸ್ರಯೇಲರನ್ನು ತಿರಸ್ಕರಿಸಿದ್ದಾರೆ ಎಂದು ಹೇಳೋಣವೆ? ಎಂದಿಗೂ ಇಲ್ಲ. ನಾನು ಸಹ ಇಸ್ರಯೇಲನು, ಅಬ್ರಹಾಮನ ಸಂತತಿಯವನು; ಬೆನ್ಯಮೀನ್ ಮನೆತನಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಗಾದರೆ, ದೇವರು ತಮ್ಮ ಜನರನ್ನು ತ್ಯಜಿಸಿಬಿಟ್ಟಿದ್ದಾರೋ ಎಂದು ಕೇಳುತ್ತೇನೆ? ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲನೂ ಅಬ್ರಹಾಮನ ವಂಶದವನೂ ಬೆನ್ಯಾಮೀನನ ಕುಲದವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಜಾಲ್ಯಾರ್ ಮಿಯಾ ಇಚಾರ್ತಾ: ದೆವಾನ್ ಅಪ್ನಾಚ್ಯಾ ಲೊಕಾಂಚೊ ತಿರಸ್ಕಾರ್ ಕರ್‍ಲ್ಯಾನ್ ಕಾಯ್? ಕನ್ನಾಚ್ ನಾ! ಮಿಯಾ ಸ್ವತಾಚ್ ಎಕ್ ಇಸ್ರಾಯೆಲಾಚೊ, ಮಾನುಸ್, ಅಬ್ರಾಹಾಮಾಚ್ಯಾ ಘರಾನ್ಯಾಚೊ ಮಾನುಸ್ ಬೆಂಜಾಮಿನಾಚ್ಯಾ ಕುಳಿಚೊ ಮಾನುಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:1
17 ತಿಳಿವುಗಳ ಹೋಲಿಕೆ  

ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು,


ನಾನು ಚಿಕ್ಕಂದಿನಿಂದ ಯಾವ ರೀತಿ ಜೆರುಸಲೇಮಿನಲ್ಲಿಯೇ ನನ್ನ ದೇಶೀಯರೊಡನೆ ಜೀವಿಸಿದೆಯೆಂಬುದು ಎಲ್ಲ ಯೆಹೂದ್ಯರಿಗೆ ತಿಳಿದ ವಿಷಯ.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ತಮ್ಮ ಮಾತಿಗೆ ಕಿವಿಗೊಡದ ಈ ಜನರನ್ನು ಸರ್ವೇಶ್ವರ ತಳ್ಳಿಬಿಡುವರು. ಇತರ ಜನಾಂಗಗಳ ಮಧ್ಯೆ ಅವರು ಅಲೆಮಾರಿಗಳಂತೆ ಇರುವರು.


ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.


ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II


“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.


ಹಾಗಾದರೆ ಇಸ್ರಯೇಲರು ಮೇಲೇಳದಂತೆ ಮುಗ್ಗರಿಸಿಬಿದ್ದರು ಎಂದು ಹೇಳೋಣವೆ? ಎಂದಿಗೂ ಇಲ್ಲ. ಅವರ ಅಪರಾಧದ ನಿಮಿತ್ತ ಇತರರಿಗೆ ಉದ್ಧಾರ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆ ಪಡುವಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು